Yogathan | ಶಿವಮೊಗ್ಗ ವಿಮಾನ‌ ನಿಲ್ದಾಣದಲ್ಲಿ ನಡೆಯಲಿದೆ ವಿಶ್ವದಾಖಲೆಯ ‘ಯೋಗಥಾನ್’, 25,000 ಯೋಗಪಟುಗಳು ಭಾಗಿ

dc selvamani

 

 

ಸುದ್ದಿ ಕಣಜ.ಕಾಂ | DISTRICT | YOGATHAN
ಶಿವಮೊಗ್ಗ: ಆಗಸ್ಟ್ 28ರಂದು ನಡೆಯಲಿರುವ ವಿಶ್ವ ದಾಖಲೆಯ ಯೋಗ ಪ್ರದರ್ಶನ ‘ಯೋಗಥಾನ್’ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ 25,000 ಯೋಗಪಟುಗಳು ಭಾಗವಹಿಸುವ ಗುರಿಯನ್ನು ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ (Dr.R.Selvamani) ತಿಳಿಸಿದರು.
‘ಯೋಗಥಾನ್’ ಕಾರ್ಯಕ್ರಮದ ಪೂರ್ವಸಿದ್ಧತೆ ಕುರಿತು ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ಅವರು ಮಾತನಾಡಿದರು.

ಯೋಗ ಪ್ರದರ್ಶನದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಈಗಿನಿಂದಲೇ ತರಬೇತಿ ನೀಡುವ ಕಾರ್ಯವನ್ನು ಆರಂಭಿಸಬೇಕು. ಸರ್ಕಾರ ಈಗಾಗಲೇ 21 ಆಸನಗಳ ಪಟ್ಟಿಯನ್ನು ಅಂತಿಮಗೊಳಿಸಿದ್ದು, ಈ ಆಸನಗಳನ್ನು ಕಾರ್ಯಕ್ರಮದಲ್ಲಿ ಭಾಗವಹಿಸುವ ಯೋಗ ಪಟುಗಳು ಅಭ್ಯಾಸ ಮಾಡಬೇಕು. 13 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳು, ಎಸ್‍.ಸಿ ಮತ್ತು ಎಸ್‍.ಟಿ, ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಲ್ಲಿರುವ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲು ಕ್ರಮ ಕೈಗೊಳ್ಳಬೇಕು.
| ಡಾ.ಆರ್.ಸೆಲ್ವಮಣಿ, ಡಿಸಿ

ನಗರದ ಹೊರವಲಯದ ಸೋಗಾನೆ(sogane)ಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ( airport)ದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗುವುದು. ಬೆಳಗ್ಗೆ 6.30ಕ್ಕೆ ಸರಿಯಾಗಿ ದೇಶಾದ್ಯಂತ ಒಂದೇ ಅವಧಿಯಲ್ಲಿ ಈ ಯೋಗ ಪ್ರದರ್ಶನ ಕಾರ್ಯಕ್ರಮ ನಡೆಯಲಿದೆ. ಎಲ್ಲಾ ಶಾಲೆ ಕಾಲೇಜುಗಳನ್ನು ಸಂಪರ್ಕಿಸಿ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಪ್ರೇರೇಪಿಸಬೇಕು ಎಂದು ತಿಳಿಸಿದರು.

READ | ಕೊಳೆ ರೋಗದಿಂದ ಅಡಿಕೆ ಮರ ರಕ್ಷಣೆ ಕ್ರಮಗಳೇನು?

ವಿವಿಧ ಸಮಿತಿಗಳ ರಚನೆ, ಸಾರಿಗೆ ವ್ಯವಸ್ಥೆ
ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಲು ವಿವಿಧ ಸಮಿತಿಗಳನ್ನು ರಚಿಸಲಾಗುವುದು. ವಿದ್ಯಾರ್ಥಿಗಳಿಗೆ ಸಾರಿಗೆ ವ್ಯವಸ್ಥೆ, ಬೆಳಗ್ಗಿನ ಉಪಾಹಾರ, ಕುಡಿಯುವ ನೀರು ವ್ಯವಸ್ಥೆ ಮಾಡಲಾಗುವುದು. ಕಾರ್ಯಕ್ರಮ ಆಯೋಜನೆ ಮಾಡುವ ಸ್ಥಳದಲ್ಲಿ ಸ್ವಚ್ಛತೆಯನ್ನು ಕಾಪಾಡಲು, ತಾತ್ಕಾಲಿಕ ಶೌಚಾಲಯಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು. ಎನ್‍.ಸಿ.ಸಿ, ಎನ್‍.ಎಸ್‍.ಎಸ್, ಸ್ಕೌಟ್ ಮತ್ತು ಗೈಡ್ಸ್ ಗಳ ಸ್ವಯಂಸೇವಕರ ಸೇವೆಯನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.
ಶಿವಮೊಗ್ಗ ಉಪವಿಭಾಗಾಧಿಕಾರಿ ದೊಡ್ಡಗೌಡರ್, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ್, ವಿವಿಧ ಇಲಾಖೆ ಅಧಿಕಾರಿಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಸಭೆಯಲ್ಲಿ ಹಾಜರಿದ್ದರು.

https://suddikanaja.com/2020/12/24/yoga-classes-in-shivamogga/

 

Leave a Reply

Your email address will not be published. Required fields are marked *

error: Content is protected !!