ಸುದ್ದಿ ಕಣಜ.ಕಾಂ | DISTRICT | RAINFALL
ಶಿವಮೊಗ್ಗ: ಹವಾಮಾನ ಇಲಾಖೆ ಮತ್ತೊಂದು ಮುನ್ಸೂಚನೆ ನೀಡಿದೆ. ಆಗಸ್ಟ್ 11 ಮತ್ತು 12ರಂದು ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಈಗಾಗಲೇ ಜಿಲ್ಲೆ ತೊಯ್ದು ತೊಪ್ಪೆಯಾಗಿದೆ. ಜನಜೀವನ ಅಸ್ತವ್ಯಸ್ತವಾಗಿದೆ. ಹಲವು ಮನೆಗಳ ಚಾವಣಿ ಕುಸಿದಿದ್ದು, ಜನರು ಆತಂಕದಲ್ಲಿಯೇ ಬದುಕು ಸಾಗಿಸುತಿದ್ದಾರೆ.