ಸುದ್ದಿ ಕಣಜ.ಕಾಂ | DISTRICT | COURT NEWS
ಶಿವಮೊಗ್ಗ: ಆಗುಂಬೆ (Agumbe) ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರ 13 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿಗೆ 20 ವರ್ಷಗಳ ಶಿಕ್ಷೆ ವಿಧಿಸಿ ನ್ಯಾಯಾಲಯವು ಬುಧವಾರ ಆದೇಶಿಸಿದೆ.
ಎಂ.ಎಚ್.ಮೊಹಮ್ಮದ್ ಮಕ್ಸೂದ್(23) ಎಂಬಾತನಿಗೆ ಶಿವಮೊಗ್ಗದ ಎಡಿಷನಲ್ ಡಿಸ್ಟ್ರಿಕ್ಟ್ ಆ್ಯಂಡ್ ಸೆಷನ್ ಕೋರ್ಟ್ ಎಫ್.ಟಿ.ಎಸ್.ಸಿ-2 (ಪೋಕ್ಸೊ) ನ್ಯಾಯಾಲಯದ ನ್ಯಾಯಾಧೀಶ ಜೆ.ಎಸ್.ಮೋಹನ್ ಅವರು ವಿಚಾರಣೆ ನಡೆಸಿ ಶಿಕ್ಷೆ ವಿಧಿಸಿದ್ದಾರೆ.
READ | ಕೇಂದ್ರೀಯ ಸಂಸದೀಯ ಮಂಡಳಿಗೆ ಬಿ.ಎಸ್.ಯಡಿಯೂರಪ್ಪ, ಬಿ.ಎಲ್.ಸಂತೋಷ್ ಆಯ್ಕೆ
2021ರ ಜೂನ್ 29ರಂದು ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ನೀಡಲಾದ ದೂರಿನ ಅನ್ವಯ ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಆಗಿನ ತನಿಖಾಧಿಕಾರಿ ತೀರ್ಥಹಳ್ಳಿ ಸಿಪಿಐ ಪ್ರವೀಣ್ ನೀಲಮ್ಮನವರ್ ತನಿಖೆ ಕೈಗೊಂಡು ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು.
ಈತನ ವಿರುದ್ಧ ಕಲಂ 6 ಪೋಕ್ಸೊ ಕಾಯ್ದೆ ಅಡಿಯಲ್ಲಿ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ₹60,000 ದಂಡ, ದಂಡವನ್ನು ಕಟ್ಟಲು ವಿಫಲನಾದರೆ ಹೆಚ್ಚುವರಿಯಾಗಿ 6 ತಿಂಗಳು ಸಾದಾ ಕಾರವಾಸ ಶಿಕ್ಷೆ ನೀಡಿ ಆದೇಶಿಸಲಾಗಿದೆ.
ಸರ್ಕಾರಿ ಅಭಿಯೋಜಕ ಹರಿಪ್ರಸಾದ್ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.
https://suddikanaja.com/2022/06/23/20-years-imprisonment-under-pocso-act/