DC Grama Vastavya | ಹಲವು ತೊಡಕುಗಳ ಬಳಿಕ ಫಿಕ್ಸ್ ಆಯ್ತು ಡಿಸಿ‌ ಗ್ರಾಮ ವಾಸ್ತವ್ಯ, ಪೂರ್ಣ ಮಾಹಿತಿ ಇಲ್ಲಿದೆ

dc selvamani

 

 

ಸುದ್ದಿ ಕಣಜ.ಕಾಂ | 18 AUG 2022 | DC GRAMA VASTAVYA
ಶಿವಮೊಗ್ಗ: ಜಿಲ್ಲೆಯಲ್ಲಿ ಮಳೆ‌ ಕಾರಣದಿಂದಾಗಿ ಮುಂದೂಡಲಾಗಿದ್ದ ಜಿಲ್ಲಾಧಿಕಾರಿ ಅವರ ಗ್ರಾಮ ವಾಸ್ತವ್ಯಕ್ಕೆ ದಿನಾಂಕ‌ ‌ನಿಗದಿಯಾಗಿದೆ.
ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ-ಕಂದಾಯ ಇಲಾಖೆ’ ಕಾರ್ಯಕ್ರಮದಡಿ ಜಿಲ್ಲಾಧಿಕಾರಿ ಡಾ.ಆರ್.‌ಸೆಲ್ವಮಣಿ ಅವರು ಆಗಸ್ಟ್ 20 ರಂದು ಭದ್ರಾವತಿ ತಾಲ್ಲೂಕಿನ ಕಸಬಾ ಹೋಬಳಿಯ ಹುಣಸೆಕಟ್ಟೆ ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮ ವಾಸ್ತವ್ಯ ಮಾಡುವರು.

READ | ಬಿ.ಎಸ್.ಯಡಿಯೂರಪ್ಪ ಅವರನ್ನು ಮುಕ್ತಕಂಠದಿಂದ ಹೊಗಳಿದ ಕೆ.ಎಸ್.ಈಶ್ವರಪ್ಪ, ‌ಕಾರಣವೇನು?
ಅಂದು ಬೆಳಗ್ಗೆ 11 ಗಂಟೆಯಿಂದ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆಯುವ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಕಂದಾಯ ಮತ್ತು ಇತರೆ ಎಲ್ಲ ಇಲಾಖೆಯ ಅಧಿಕಾರಿಗಳೊಂದಿಗೆ ಅವರು ಸಾರ್ವಜನಿಕರನ್ನು ಭೇಟಿ ಮಾಡಿ, ಅವರ ಕುಂದು ಕೊರತೆಗಳನ್ನು ಆಲಿಸಿ ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವರು.
ಗ್ರಾಮದ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಮುಂಚಿತವಾಗಿ ತಮ್ಮ ಗ್ರಾಮದಲ್ಲಿಯೇ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸಲ್ಲಿಸಿ ಆ.20 ರಂದು ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಡಿಸಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!