ಸುದ್ದಿ ಕಣಜ.ಕಾಂ | 20 AUG 2022 | WATER SUPPLY
ಶಿವಮೊಗ್ಗ: ಕೃಷ್ಣರಾಜೇಂದ್ರ ಜಲಶುದ್ಧೀಕರಣ ಕೇಂದ್ರಕ್ಕೆ ವಿದ್ಯುತ್ ಪೂರೈಕೆಯನ್ನು ನಿಲುಗಡೆ ಮಾಡುತ್ತಿರುವುದರಿಂದ ಆಗಸ್ಟ್ 21 ಮತ್ತು 22ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಸಾರ್ವಜನಿಕರು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯೊಂದಿಗೆ ಸಹಕರಿಸುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ.