Ganesh Festival | ಶಿವಮೊಗ್ಗದಲ್ಲಿ ಡಿಜೆ ನಿಷೇಧ, ಯಾವಾಗಿಂದ ನಿಯಮ ಅನ್ವಯ?

DJ

 

 

  • ಆಗಸ್ಟ್ 31ರಿಂದ ಗಣೇಶೋತ್ಸವ ಆಚರಣೆಗಳು ಪೂರ್ಣಗೊಳ್ಳುವವರೆಗೆ ಶಿವಮೊಗ್ಗ ಜಿಲ್ಲೆಯಾದ್ಯಂತ ಡಿಜೆ ಸಿಸ್ಟಂ ಬಳಕೆ ನಿಷೇಧ
  • ಸಾರ್ವಜನಿಕರ ಹಿತ, ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಡಿಜಿಗೆ ನಿಷೇಧಿಸಿ ಆದೇಶ

ಸುದ್ದಿ ಕಣಜ.ಕಾಂ | DISTRICT | 27 AUG 2022
ಶಿವಮೊಗ್ಗ: ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ದೃಷ್ಟಿಯಿಂದ ಆಗಸ್ಟ್ 31ರಿಂದ ಗಣೇಶೋತ್ಸವ ಆಚರಣೆಗಳು ಪೂರ್ಣಗೊಳ್ಳುವವರೆಗೆ ಶಿವಮೊಗ್ಗ ಜಿಲ್ಲೆಯಾದ್ಯಂತ ಡಿಜೆ ಸಿಸ್ಟಂ ಬಳಕೆ ನಿಷೇಧಗೊಳಿಸಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಆದೇಶಿಸಿದ್ದಾರೆ.

DJ BAN In shivamogga

READ | ಗಣೇಶ ವಿಸರ್ಜನೆಗೆ ಸಂಚಾರಿ ಟ್ಯಾಂಕ್, ಎಲ್ಲೆಲ್ಲಿ ಯಾವಾಗ ಬರಲಿದೆ? 

ಡಿಜೆ ನಿಷೇಧಕ್ಕೇನು ಕಾರಣ
ಗಣಪತಿ ವಿಸರ್ಜನಾ ಮೆರವಣಿಗೆ ವೇಳೆಯಲ್ಲಿ ಡಿಜೆ ಸಿಸ್ಟಂಗಳನ್ನು ಉಪಯೋಗಿಸುವುದರಿಂದ ಸಾರ್ವಜನಿಕರಿಗೆ ವಿದ್ಯಾರ್ಥಿಗಳಿಗೆ, ವಯಸ್ಕರರಿಗೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ತೊಂದರೆಯಾಗುತ್ತದೆ.
ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರ ಹಿತ, ಸೌಹಾರ್ದತೆ ಮತ್ತು ಶಾಂತಿ ಕಾಪಾಡುವ ಸಲುವಾಗಿ ಗಣೇಶೋತ್ಸವ ಆಚರಣೆಗಳು ಪೂರ್ಣಗೊಳ್ಳುವವರೆಗೆ ಶಿವಮೊಗ್ಗ ಜಿಲ್ಲೆಯಾದ್ಯಂತ ಗಣೇಶ ವಿಸರ್ಜನಾ ಮೆರವಣಿಗೆ ಸಂದರ್ಭದಲ್ಲಿ ಡಿಜೆ ಸಿಸ್ಟಂ ನಿಷೇಧಗೊಳಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!