ಸುದ್ದಿ ಕಣಜ.ಕಾಂ | CITY | POWER CUT
ಶಿವಮೊಗ್ಗ: ನಗರದ ಹಲವೆಡೆ ಆಗಸ್ಟ್ 3 ಮತ್ತು 4ರಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಎಫ್ 9ರಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆಗಸ್ಟ್ 3ರಂದು ಬೆಳಗ್ಗೆ 10 ರಿಂದ ಸಂಜೆ 6ರವರೆಗೆ ಶರಾವತಿನಗರ ಎ ಬ್ಲಾಕ್ ಸುತ್ತಮುತ್ತ, ಶರಾವತಿನಗರ ಬಿ ಬ್ಲಾಕ್ ರುದ್ರಭೂಮಿಯ ಮುಂಭಾಗ, ಜೈಲ್ ರಸ್ತೆ, ಲಕ್ಷ್ಮೀ ಟಾಕೀಸ್ ಮುಂಭಾಗ, ವಿಠ್ಠಲ ದೇವಸ್ಥಾನ, ಹೊಸಮನೆ ಚಾನೆಲ್ ಏರಿಯಾ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
READ | ಶಿವಮೊಗ್ಗದಲ್ಲಿ ನಡೆಯಲಿದೆ ಮಿನಿ ಉದ್ಯೋಗ ಮೇಳ, ಯಾರೆಲ್ಲ ಪಾಲ್ಗೊಳ್ಳಬಹುದು?
ಮಂಡ್ಲಿ ವಿದ್ಯುತ್ ವಿತರಣೆ ಕೇಂದ್ರದಿಂದ ಸರಬರಾಜಾಗುವ ಘಟಕ 5 ಮತ್ತು 6 ರಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ 11 ಕೆವಿ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆ.4ರಂದು ಬೆಳಗ್ಗೆ 9 ರಿಂದ ಸಂಜೆ 6 ರವರೆಗೆ ದುರ್ಗಿಗುಡಿ, ಗಾರ್ಡನ್ ಏರಿಯಾ, ನೆಹರೂ ರಸ್ತೆ, ಇಲಿಯಾಜ್ ನಗರ 4 ರಿಂದ 13ನೇ ಕ್ರಾಸ್, 100 ಅಡಿರಸ್ತೆ, ಫಾರೂಕ್ಯ ಶಾದಿಮಹಲ್, ಎಸ್.ಜೆ. ಶಾದಿಮಹಲ್, ಮಂಡಕ್ಕಿಭಟ್ಟಿ, ಟಿಪ್ಪುನಗರ, ಮಂಜುನಾಥ ಬಡಾವಣೆ, ಖಾಜಿನಗರ 80 ಅಡಿ ರಸ್ತೆ, ಕಾಮತ್ ಲೇಔಟ್, ಮಲ್ಲಿಕಾರ್ಜುನ ಬಡಾವಣೆ ಮತ್ತು ಸುತ್ತಮುತ್ತಲಿನ ಪ್ರದೇಶ, ಕಲ್ಲೂರು ಗ್ರಾಮಾಂತರ ಪ್ರದೇಶ, ಐಹೊಳೆ, ಅಗಸವಳ್ಳಿ, ಕಲ್ಲೂರು, ಗೋವಿಂದಪುರ, ಅನುಪಿನಕಟ್ಟೆ, ಪುರದಾಳು, ರಾಮಿನಕೊಪ್ಪ, ಮೈಲಾರಪ್ಪನ ಕ್ಯಾಂಪ್, ಹನುಮಂತಾಪುರ, ಶರಾವತಿನಗರ, ಶಾರದ ಕಾಲೋನಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕೆಂದು ಕೋರಲಾಗಿದೆ.