ಸುದ್ದಿ ಕಣಜ.ಕಾಂ | DISTRICT | 01 SEPT 2022
ಶಿವಮೊಗ್ಗ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಐ.ಬಿ.ಪಿ.ಎಸ್ ರಾಷ್ಟ್ರೀಕೃತ ಬ್ಯಾಂಕ್ ನವರು ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ನೀಡಲು ನಿರ್ಧರಿಸಿದೆ.
READ | ನಾಳೆ ನಡೆಯಬೇಕಿದ್ದ ಡಿಪ್ಲೋಮಾ ಥಿಯರಿ ಪರೀಕ್ಷೆ ಮುಂದೂಡಿಕೆ, ಯಾವಾಗ ನಡೆಯಲಿದೆ ಪರೀಕ್ಷೆ?
ಆಸಕ್ತರು ಸೆಪ್ಟೆಂಬರ್ 6ರೊಳಗಾಗಿ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ದೂ.ಸಂ. 0821-2515944 ಅನ್ನು ಸಂಪರ್ಕಿಸಬಹುದೆಂದು ಕರಾಮುವಿ ಪ್ರಭಾರ ಕುಲಸಚಿವ ಡಾ.ಎ.ಖಾದರ್ ಪಾಶಾ ತಿಳಿಸಿದ್ದಾರೆ.