ಸುದ್ದಿ ಕಣಜ.ಕಾಂ | CITY | 02 SEPT 2022
ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆ ಮೇಯರ್ ಮತ್ತು ಉಪ ಮೇಯರ್ ಸ್ಥಾನಗಳಿಗೆ ಚುನಾವಣೆ ನಡೆಸಲು ಸೆಪ್ಟೆಂಬರ್ 13 ರ ಮಧ್ಯಾಹ್ನ 3 ಗಂಟೆಗೆ ಮಹಾನಗರ ಪಾಲಿಕೆಯ ಚುನಾವಣಾ ಸಭೆಯನ್ನು ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ಅವರ ಅಧ್ಯಕ್ಷತೆಯಲ್ಲಿ ಕರೆಯಲಾಗಿದೆ.
ಚುನಾವಣಾ ವೇಳಾಪಟ್ಟಿ
ಸೆಪ್ಟೆಂಬರ್ 13ರಂದು ಮಧ್ಯಾಹ್ನ 12 ಗಂಟೆಯಿಂದ 1 ಗಂಟೆಯೊಳಗೆ ಮಹಾಪೌರ ಹಾಗೂ ಉಪ ಮಹಾಪೌರರ ನಾಮಪತ್ರಗಳನ್ನು ಸ್ವೀಕರಿಸುವುದು. ಮಧ್ಯಾಹ್ನ 3 ಗಂಟೆಗೆ ಸಭೆ ಪ್ರಾರಂಭಗೊಳ್ಳುವುದು. ಮಧ್ಯಾಹ್ನ 3 ಗಂಟೆಯ ನಂತರ ಮಹಾಪೌರ, ಉಪಮಹಾಪೌರ ಸ್ಥಾನಕ್ಕೆ ಚುನಾವಣೆ ಪ್ರಕ್ರಿಯೆ ನಡೆಯುವುದು ಎಂದು
ಬೆಂಗಳೂರು ವಿಭಾಗ ಪ್ರಾದೇಶಿಕ ಆಯುಕ್ತ ಆದಿತ್ಯ ಅಮ್ಲಾನ್ ಬಿಸ್ವಾಸ್ ತಿಳಿಸಿದ್ದಾರೆ.