HIGHLIGHTS
- ಎಸ್ಎಸ್ಎಲ್ಸಿ, ಐಟಿಐ ಮತ್ತು ಡಿಪ್ಲೊಮಾ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳಿಗೆ ಅವಕಾಶ
- ನೇರ ಸಂದರ್ಶನದಲ್ಲಿ ಪ್ರತಿಷ್ಠಿತ ಕಂಪೆನಿಗಳು ಭಾಗಿ, ಭರಪೂರ ಉದ್ಯೋಗ ಅವಕಾಶ
ಸುದ್ದಿ ಕಣಜ.ಕಾಂ| DISTRICT | 14 SEP 2022
ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಸೆಪ್ಟೆಂಬರ್ 15ರಂದು ಬೆಳಗ್ಗೆ 10 ಗಂಟೆಗೆ ಗುತ್ತ್ಯಪ್ಪ ಕಾಲೋನಿಯ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ (District Employment Exchange Office) ಯಲ್ಲಿ ನೇರ ಸಂದರ್ಶನ (ವಾಕ್ ಇನ್ ಇಂಟರ್ವ್ಯೂ) ಆಯೋಜಿಸಲಾಗಿದೆ.
ಈ ನೇರ ಸಂದರ್ಶನದಲ್ಲಿ ಪ್ರತಿಷ್ಠಿತ ಖಾಸಗಿ ಕಂಪೆನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ.
READ | ಆಟೋ ಚಾಲಕ ಮಹಮ್ಮದ್ ಗೌಸ್ ಪ್ರಾಮಾಣಿಕತೆಗೆ ಪೊಲೀಸ್ ಷಹಭಾಸ್’ಗಿರಿ
ಯಾರೆಲ್ಲ ಭಾಗವಹಿಸಬಹುದು?
ಎಸ್ಎಸ್ಎಲ್ಸಿ, ಐಟಿಐ ಮತ್ತು ಡಿಪ್ಲೊಮಾ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೊಡೇಟಾ (ರೆಸ್ಯೂಮ್) ಮತ್ತು ಆಧಾರ್ ಕಾರ್ಡ್ ಪ್ರತಿ ತೆಗೆದುಕೊಂಡು ಸಂದರ್ಶನಲ್ಲಿ ಭಾಗವಹಿಸಬಹುದು.
ಪ್ರವೇಶ ಉಚಿತವಾಗಿದ್ದು ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ : 08182-255293 / 9380663606/ 9108235132 ಮೂಲಕ ಸಂಪರ್ಕಿಸಬಹುದೆಂದು ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
https://suddikanaja.com/2022/09/13/training-for-competative-exams-by-ksou/