HIGHLIGHTS
- ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಯುವಕನಿಗೆ ಜೈಲು ಶಿಕ್ಷೆ
- ಜೋಗ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಅಡಿ ದಾಖಲಾದ ಪ್ರಕರಣ
ಸುದ್ದಿ ಕಣಜ.ಕಾಂ | DISTRICT | 16 SEP 2022
ಶಿವಮೊಗ್ಗ: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಯುವಕನಿಗೆ ಒಂದು ವರ್ಷ ಸಾಧಾರಣ ಕಾರಾಗೃಹ ಶಿಕ್ಷೆ ಮತ್ತು ₹30,000 ದಂಡ ವಿಧಿಸಲಾಗಿದೆ.
READ | ಶಿವಮೊಗ್ಗದ ಲಾಡ್ಜ್ ನಲ್ಲಿ ವಿಷ ಸೇವಿಸಿ ಯುವಕ ಆತ್ಮಹತ್ಯೆ, ಡೆತ್ ನೋಟ್ ನಲ್ಲೇನಿದೆ?
ಸಾಗರ ತಾಲ್ಲೂಕಿನ ನಿವಾಸಿ ವಿನೋದ್(19) ಶಿಕ್ಷೆಗೆ ಒಳಗಾದ ಯುವಕ. ಈತ ಏಪ್ರಿಲ್ 28ರಂದು ಸಂಜೆ ಅಪ್ರಾಪ್ತ ಬಾಲಕಿಯು ತನ್ನ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ನೀಡಿದ ದೂರಿನ ಮೇರೆಗೆ ಜೋಗ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆ ರೀತ್ಯಾ ಪ್ರಕರಣ ದಾಖಲಾಗಿದೆ.
ತನಿಖಾಧಿಕಾರಿ ಜೋಗ ಠಾಣೆ ಪಿಎಸ್.ಐ ನಿರ್ಮಲಾ ಪ್ರಕರಣದ ತನಿಖೆಯನ್ನು ಕೈಗೊಂಡು ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಅನ್ನು ಸಲ್ಲಿಸಿರುತ್ತಾರೆ.
ಶಿವಮೊಗ್ಗ ನ್ಯಾಯಾಲಯದ ನ್ಯಾಯಧೀಶರಾದ ಲತಾ ಅವರು ವಿಚಾರಣೆ ಕೈಗೊಂಡು ಕಲಂ 12 ಪೋಕ್ಸೊ ಕಾಯ್ದೆ ಅಡಿಯಲ್ಲಿ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ 1 ವರ್ಷ ಸಾಧಾರಣ ಕಾರಾಗೃಹ ಶಿಕ್ಷೆ ಮತ್ತು ₹30,000 ದಂಡ, ದಂಡವನ್ನು ಕಟ್ಟಲು ವಿಫಲನಾದರೆ ಹೆಚ್ಚುವರಿಯಾಗಿ 10 ತಿಂಗಳ ಕಾಲ ಸಾದಾ ಕಾರವಾಸ ಶಿಕ್ಷೆ ನೀಡಿ ಆದೇಶ ನೀಡಿರುತ್ತಾರೆ. ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಹರಿಪ್ರಸಾದ್ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.
ಬೆಂಕಿಪೊಟ್ಟಣ ಕೇಳಿಕೊಂಡ ಬಂದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿಗೆ ಕಠಿಣ ಶಿಕ್ಷೆ