HIGHLIGHTS
- ಶಿವಮೊಗ್ಗ ನಗರ ಮತ್ತು ಗ್ರಾಮೀಣ ಭಾಗದ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
- ಕುಂಸಿಯಲ್ಲಿ ಎರಡು ದಿನ ಬೆಳಗ್ಗೆಯಿಂದ ಸಂಜೆಯವರೆಗೆ ಪವರ್ ಕಟ್
ಸುದ್ದಿ ಕಣಜ.ಕಾಂ | DISTRICT | 20 SEP 2022
ಶಿವಮೊಗ್ಗ (shivamogga): ತಾಲೂಕು ಮತ್ತು ನಗರ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಸೆ.21, 23 ರಂದು ಕುಂಸಿ ಭಾಗದಲ್ಲಿ ಪವರ್ ಕಟ್
ಶಿವಮೊಗ್ಗ ತಾಲ್ಲೂಕು ಕುಂಸಿ ಗ್ರಾಮದ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರಕ್ಕೆ ವಿದ್ಯುತ್ ಪೂರೈಸುವ 110/11 ಕೆವಿ ವಿದ್ಯುತ್ ಮಾರ್ಗದ ನಿರ್ವಹಣೆ ಹಾಗೂ ತುರ್ತು ಕಾಮಗಾರಿ ಇರುವುದರಿಂದ ಕೆಳಕಂಡ ಹಳ್ಳಿಗಳಲ್ಲಿ ಸೆ.21 ಹಾಗೂ 23ರ ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
READ | ಶಿವಮೊಗ್ಗದಲ್ಲಿ ‘ರಂಗದಸರಾ’ ಹವಾ, ಎಲ್ಲೆಲ್ಲಿ ಏನೇನು ಕಾರ್ಯಕ್ರಮ, ಯಾವಾಗಿಂದ ಆರಂಭ?
Area details | ಕುಂಸಿ, ಬಾಳೆಕೊಪ್ಪ, ಚೋರಡಿ, ತುಪ್ಪೂರು, ಕೋಣಿಹೂಸೂರು, ಹೊರಬೈಲು ಇನ್ನಿತರೆ ಸುತ್ತಮುತ್ತಲ ಗ್ರಾಮಗಳು, ಹಾರ್ನಳ್ಳಿ, ರಾಮನಗರ, ಮುದುವಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ, ಕೊನಗವಳ್ಳಿ, ಹಿಟ್ಟೂರು, ನಾರಾಯಣಪುರ, ಮಲ್ಲಾಪುರ, ರಟ್ಟೆಹಳ್ಳಿ ಹಾಗೂ ಇನ್ನಿತರೆ ಸುತ್ತಮುತ್ತಲ ಗ್ರಾಮಗಳು, ಆಯನೂರು, ಮಂಡಘಟ್ಟ, ಸಿರಿಗೆರೆ, ಸೂಡೂರು, ಕೂಡಿ, ಮಲೆಶಂಕರ, ದೊಡ್ಡಮತ್ತಲಿ, ತಮ್ಮಡಿಹಳ್ಳಿ ಇನ್ನಿತರ ಸುತ್ತಮುತ್ತ ಗ್ರಾಮಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
MRS ವ್ಯಾಪ್ತಿಯಲ್ಲೂ ವಿದ್ಯುತ್ ವ್ಯತ್ಯಯ
ಎಂ.ಆರ್.ಎಸ್. 110/11ಕೆವಿ ವಿದ್ಯುತ್ ವಿತರಣಾ ಕೇಂದ್ರಕ್ಕೆ ವಿದ್ಯುತ್ ಪೂರೈಸುವ 110/11ಕೆವಿ ವಿದ್ಯುತ್ ಮಾರ್ಗದ ತ್ರೈಮಾಸಿಕ ನಿರ್ವಹಣೆ ಕಾರ್ಯ ಹಾಗೂ ತುರ್ತು ಕಾಮಗಾರಿ ಇರುವುದರಿಂದ ಈ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಗ್ರಾಮಗಳಲ್ಲಿ ಸೆ.21ರಂದು ಬೆಳಗ್ಗೆ 9ರಿಂದ ಸಂಜೆ 5.30 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
READ | ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್, ಶಿವಮೊಗ್ಗದಲ್ಲಿ CLT ಪುನರಾರಂಭ, ಯಾವಾಗ ನಡೆಯಲಿವೆ ಪರೀಕ್ಷೆ?
Area details | ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ಹಾರೋಬೆನವಳ್ಳಿ, ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಅಬ್ಬರಘಟ್ಟ ಮತ್ತು ಸುತ್ತಮುತ್ತಲಿನ ಇನ್ನಿತರೆ ಸುತ್ತಮುತ್ತ ಗ್ರಾಮಗಳ ವ್ಯಾಪ್ತಿಯಲ್ಲಿ ಹಾಗೂ ನಗರ ವ್ಯಾಪ್ತಿಯ ಎಂ.ಆರ್.ಎಸ್. ಕಾಲೋನಿ, ಹರಿಗೆ ಮಲವಗೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ವಡ್ಡಿನಕೊಪ್ಪ, ಜ್ಯೋತಿನಗರ, ವಿದ್ಯಾನಗರ, ಕಂಟ್ರೀಕ್ಲಬ್ ರಸ್ತೆ, ಚಿಕ್ಕಲ್ಲು, ಗುರುಪುರ, ಪುರಲೆ, ಸಿದ್ಧೇಶ್ವರ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವ್ಯತ್ಯಯವಾಗಲಿದೆ.
ಇಂದಿರಾನಗರ ಬಡಾವಣೆಯಲ್ಲಿ ಕರೆಂಟ್ ಇರಲ್ಲ
ಪರಿವರ್ತಕ ಸ್ಥಳಾಂತರ ಕಾಮಗಾರಿ ಇರುವುದರಿಂದ ಇಂದಿರಾನಗರ ಬಡಾವಣೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸೆ.21ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
https://suddikanaja.com/2022/09/19/computer-literacy-test-center-at-it-park-shimoga/