HIGHLIGHTS
- ಭದ್ರಾವತಿಯ ಗ್ರಾಮವೊಂದರ ನಿವಾಸಿ ಆರ್ಮುಗಂಗೆ ಜೀವಾವಧಿ ಶಿಕ್ಷೆ, 20 ಸಾವಿರ ರೂಪಾಯಿ ದಂಡ
- ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ
ಸುದ್ದಿ ಕಣಜ.ಕಾಂ | DISTRICT | 30 SEP 2022
ಶಿವಮೊಗ್ಗ(shivamogga): ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣವೊಂದರಲ್ಲಿ ಪೋಕ್ಸೋ ಕಾಯ್ದೆ (POCSO Act) ಅಡಿಯಲ್ಲಿ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಅಪರಾಧಿಗೆ ಜೀವಾವಧಿ ಶಿಕ್ಷೆ ಮತ್ತು 20,000 ರೂಪಾಯಿ ದಂಡ ವಿಧಿಸಲಾಗಿದೆ.
READ | ಶಿವಮೊಗ್ಗ ಮಹಾನಗರ ಪಾಲಿಕೆ ಮೇಯರ್, ಉಪ ಮೇಯರ್ ಹೊಸ ಮೀಸಲಾತಿ ಪಟ್ಟಿ ಪ್ರಕಟ
ಭದ್ರಾವತಿ (Bhadravathi) ತಾಲ್ಲೂಕಿನ ಗ್ರಾಮವೊಂದರ ಆರ್ಮುಗಂ(38) ಎಂಬಾತನಿಗೆ ಶಿಕ್ಷೆ ವಿಧಿಸಲಾಗಿದೆ. ಈತನು 10 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುತ್ತಾನೆಂದು ನೊಂದ ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಗಿನ ತನಿಖಾಧಿಕಾರಿ ಸಿಪಿಐ ಇ.ಓ.ಮಂಜುನಾಥ್ ಪ್ರಕರಣದ ತನಿಖೆ ಕೈಗೊಂಡು ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಶಿವಮೊಗ್ಗ Addl District and Sessions Court, FTSC–II (POCSO) ನ್ಯಾಯಾಲಯವು ಪೋಕ್ಸೋ ಅಡಿ ಪ್ರಕರಣಗಳು ದೃಢಪಟ್ಟಿರುವುದರಿಂದ ನ್ಯಾಯಾಧೀಶ ಜೆ.ಎಸ್.ಮೋಹನ್ ಅವರು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರಿ ಅಭಿಯೋಜಕ ಹರಿಪ್ರಸಾದ್ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.
https://suddikanaja.com/2022/09/29/ashraya-houses-at-gopishettikoppa/