
HIGHLIGHTS
- ಆಯ್ಕೆಯಾದ ಟ್ರೈನರ್’ಗಳು 2023 ರ ಮಾರ್ಚ್ ವರೆಗೆ ಗೌರವಧನದ ಆಧಾರದ ಮೇಲೆ ಕಾರ್ಯ ನಿರ್ವಹಿಸಲು ಸಿದ್ಧರಿರಬೇಕು.
- ಕ್ರೀಡಾಪಟುಗಳಿಗೆ ಹಾಕಿ, ಕುಸ್ತಿ ಮತ್ತು ವಾಲಿಬಾಲ್ ಕ್ರೀಡೆಗಳಲ್ಲಿ ತರಬೇತಿ ನೀಡಲು ನುರಿತ ಟ್ರೈನರ್’ಗಳಿಂದ ಅರ್ಜಿ ಆಹ್ವಾನ
ಸುದ್ದಿ ಕಣಜ.ಕಾಂ | DISTRICT | 15 SEP 2022
ಶಿವಮೊಗ್ಗ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನಿರ್ವಹಣೆ ಮಾಡುತ್ತಿರುವ ಶಿವಮೊಗ್ಗ ಜಿಲ್ಲಾ ಕ್ರೀಡಾ ಶಾಲೆ, ವಸತಿ ನಿಲಯಗಳಲ್ಲಿನ ಕ್ರೀಡಾಪಟುಗಳಿಗೆ ಹಾಕಿ, ಕುಸ್ತಿ ಮತ್ತು ವಾಲಿಬಾಲ್ ಕ್ರೀಡೆಗಳಲ್ಲಿ ತರಬೇತಿ ನೀಡಲು ನುರಿತ ಟ್ರೈನರ್ ‘ಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಯಾರು ಅರ್ಹರು?
ಸರ್ಕಾರದ ಅಂಗೀಕೃತ ಸಂಸ್ಥೆಗಳಿಂದ ಹಾಕಿ, ಕುಸ್ತಿ ಮತ್ತು ವಾಲಿಬಾಲ್ ಕ್ರೀಡೆಯಲ್ಲಿ ಎನ್.ಐ.ಎಸ್ ಸರ್ಟಿಫಿಕೇಟ್ ಕೋರ್ಸ್ ಅಥವಾ ಸರ್ಕಾರದಿಂದ ಅಂಗೀಕೃತ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಈ ಕ್ರೀಡೆಗಳಲ್ಲಿ ಅಂತರರಾಷ್ಟ್ರ, ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಪದಕ ವಿಜೇತರಾದವರು ಅರ್ಜಿ ಸಲ್ಲಿಸಬಹುದು.
ಕನಿಷ್ಠ 21 ವರ್ಷ ಮೇಲ್ಪಟ್ಟವರಿಗೆ ಆದ್ಯತೆ ನೀಡಲಾಗುವುದು. ಆಯ್ಕೆ ತಾತ್ಕಾಲಿಕವಾಗಿದ್ದು, ಆಯ್ಕೆಯಾದ ಟ್ರೈನರ್’ಗಳು 2023 ರ ಮಾರ್ಚ್ ವರೆಗೆ ಗೌರವಧನದ ಆಧಾರದ ಮೇಲೆ ಕಾರ್ಯ ನಿರ್ವಹಿಸಲು ಸಿದ್ಧರಿರಬೇಕು.
ಅರ್ಜಿಗಳನ್ನು ಇಲ್ಲಿಗೆ ತಲುಪಿಸಿ
ಆಸಕ್ತರು ತಮ್ಮ ಸ್ವವಿವರಗಳೊಂದಿಗೆ ಅರ್ಜಿಗಳನ್ನು ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರೂ ಕ್ರೀಡಾಂಗಣ, ಶಿವಮೊಗ್ಗ ಇಲ್ಲಿ ಸೆಪ್ಟೆಂಬರ್ 20 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಕಚೇರಿಯನ್ನು ಸಂಪರ್ಕಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.