Arecanut disease | ಅಡಿಕೆ‌ ಎಲೆ ಚುಕ್ಕೆ ರೋಗ, ಕೇಂದ್ರ ಸರ್ಕಾರಕ್ಕೆ ಭೇಟಿ ನೀಡಲಿದೆ ನಿಯೋಗ, ಚರ್ಚೆಯ ವಿಷಯಗಳೇನು?

araga halappa

 

 

ಸುದ್ದಿ ಕಣಜ.ಕಾಂ | DISTRICT | 18 OCT 2022
ಶಿವಮೊಗ್ಗ(shivamogga): ಅಡಿಕೆ (arecanut) ಎಲೆಚುಕ್ಕೆ ರೋಗದಿಂದ ನಲುಗಿದ್ದು, ರೋಗ ನಿಯಂತ್ರಣ ಬಗ್ಗೆ ಕೇಂದ್ರ ಸರಕಾರದ ಗಮನ ಸೆಳೆಯಲು ದೆಹಲಿಗೆ ನಿಯೋಗ ಕೊಂಡೊಯ್ಯಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ (araga jnanendra) ತಿಳಿಸಿದರು.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಅಡಿಕೆಯು ಶಿವಮೊಗ್ಗ, ಚಿಕ್ಕಮಗಳೂರು (chikkamagaluru) ಹಾಗೂ ಕರಾವಳಿ (Coastal) ಭಾಗದಲ್ಲಿ ರೈತ ಸಮುದಾಯದ ಜೀವನಾಡಿಯಾಗಿದೆ. ಎಲೆ ಚುಕ್ಕೆ ರೋಗ ಇಡೀ ಮಲೆನಾಡು ಭಾಗದ ಅಡಿಕೆ ತೋಟಗಳಲ್ಲಿ ವ್ಯಾಪಕವಾಗಿ ಹಬ್ಬಿದ್ದು, ಬೆಳೆ ಸಂಪೂರ್ಣವಾಗಿ ನಾಶವಾಗುವ ಅಪಾಯವಿದೆ ಎಂದು ಹೇಳಿದರು.

READ | ಶರಾವತಿ ಮುಳುಗಡೆ ಸಂತ್ರಸ್ತರಿಗೆ ಅಭಯ ನೀಡಿದ ಸಂಸದ ಬಿ.ವೈ.ರಾಘವೇಂದ್ರ, ಏನೇನು ಭರವಸೆ?

ನಿಯೋಗ ಭೇಟಿ ನಂತರ ಚರ್ಚಿಸಲಿರುವ ವಿಷಯಗಳಿವು

  • ಅಡಿಕೆ ಬೆಳೆಯನ್ನು ಉಳಿಸಿ, ಬೆಳೆಗಾರರ ರಕ್ಷಣೆಗೆ ಬರಬೇಕಾದ ತುರ್ತು ಅಗತ್ಯವಿದ್ದು, ತಕ್ಷಣ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹಾಗೂ ಇತರರನ್ನು ಭೇಟಿಯಾಗಿ ಚರ್ಚಿಸಲಾಗುವುದು.
  • ಎಲೆ ಚುಕ್ಕೆ ರೋಗದ ನಿಯಂತ್ರಣ ಬಗ್ಗೆ, ಸಂಶೋಧನೆ, ರೈತರಿಗೆ ಪರಿಹಾರ ಹಾಗೂ ಇತರ ಮಾರ್ಗೋಪಾಯಗಳನ್ನು ಕಂಡುಕೊಳ್ಳುವ ಬಗ್ಗೆಯೂ ಚರ್ಚಿಸಲಾಗುವುದು.

ಈಗಾಗಲೇ ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಹರತಾಳು ಹಾಲಪ್ಪ ಇತರರು ರೋಗ ಪೀಡಿತ ಅಡಿಕೆ ತೋಟಗಳಿಗೆ ಭೇಟಿ ನೀಡಿ ರೈತರು, ಸಂಶೋಧನಾ ಕೇಂದ್ರದ ವಿಜ್ಞಾನಿಗಳೊಂದಿಗೆ ಸಮಾಲೋಚನೆ ಕೂಡ‌ ಮಾಡಿದ್ದಾರೆ.
ನಿಯೋಗದಲ್ಲಿ ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಹರತಾಳು ಹಾಲಪ್ಪ, ಸೊರಬ ಮಂಜಪ್ಪ ಇತರರು ಇರಲಿದ್ದಾರೆ.

https://suddikanaja.com/2022/10/18/today-arecanut-rate-in-karnataka-121/

Leave a Reply

Your email address will not be published. Required fields are marked *

error: Content is protected !!