Bhutan arecanut | ಭೂತಾನ್ ಅಡಿಕೆ ಆಮದು ಬಗ್ಗೆ ಅಡಕೆ ಟಾಸ್ಕ್ ಫೋರ್ಸ್‌ ಅಧ್ಯಕ್ಷ ಆಗರ ಜ್ಞಾನೇಂದ್ರ ಪ್ರಮುಖ ಹೇಳಿಕೆ

Araga jnanendra

 

 

HIGHLIGHTS

  • ಭೂತಾನ್ ಅಡಿಕೆ ಹಸಿ ಅಡಿಕೆ ಆಮದಿನಿಂದ ದೇಶಿ ಅಡಿಕೆಯ ಬೆಲೆಯ ಮೇಲೆ ಪರಿಣಾಮ ಬೀರುವುದಿಲ್ಲ: ಆರಗ ಜ್ಞಾನೇಂದ್ರ ಹೇಳಿಕೆ
  • ರಾಜ್ಯದ ಅಡಿಕೆ ಬೆಳೆಗಾರರು ಭಯಪಡುವ ಅಗತ್ಯವಿಲ್ಲ ಎಂದು ಅಭಯ ನೀಡಿದ ಅಡಿಕೆ ಟಾಸ್ಕ್ ಫೋರ್ಸ್ ಅಧ್ಯಕ್ಷ ಆರಗ ಜ್ಞಾನೇಂದ್ರ
  • ಅಡಿಕೆ ಬೆಳೆಗಾರರ ಹಿತ ಕಾಪಾಡಲು ಶೀಘ್ರವೇ ರಾಜ್ಯದ ಸಂಸದರ ನೇತೃತ್ವದಲ್ಲಿ ಕೇಂದ್ರಕ್ಕೆ ನಿಯೋಗ ಭೇಟಿ

ಸುದ್ದಿ ಕಣಜ.ಕಾಂ | KARNATAKA | 01 SEP 2022
ಬೆಂಗಳೂರು (Bangaluru): ನೆರೆಯ ಪುಟ್ಟ ದೇಶ ಭೂತಾನ್(Bhutan) ನಿಂದ 17 ಸಾವಿರ ಟನ್ ಹಸಿ ಅಡಿಕೆ (green areca nut) ಆಮದು (import) ಮಾಡಿಕೊಳ್ಳಲು ಅವಕಾಶ ನೀಡಿದ ಕೇಂದ್ರದ ನಿರ್ಧಾರದಿಂದ, ದೇಶಿಯ ಅಡಕೆ ಮಾರುಕಟ್ಟೆ ಮೇಲೆ ಯಾವುದೇ ಪ್ರತಿಕೂಲ ಪರಿಣಾಮ ಬೀರುವುದಿಲ್ಲ ಎಂದು ಗೃಹ ಸಚಿವ ಹಾಗೂ ರಾಜ್ಯ ಅಡಿಕೆ ಟಾಸ್ಕ್ ಫೋರ್ಸ್ (areca nut task force) ಅಧ್ಯಕ್ಷ ಆರಗ ಜ್ಞಾನೇಂದ್ರ (Araga Jnanendra) ತಿಳಿಸಿದ್ದಾರೆ.

READ | ಅಡಿಕೆ ಬೆಳೆಗಾರರಲ್ಲಿ ಮತ್ತೆ ನಡುಕ, ಆಮದಯ ಸುಂಕವಿಲ್ಲದೇ ಭೂತಾನ್ ಅಡಿಕೆಗೆ ಮಣೆ, ಮುಂದೇನಾಗಲಿದೆ ಧಾರಣೆ?

ಈ ಕುರಿತು ಪ್ರತಿಕ್ರಿಯಿಸಿರುವ ಸಚಿವರು, ಪ್ರಸ್ತುತ ನಮ್ಮ ದೇಶದಿಂದ ಭೂತಾನ್ ದೇಶಕ್ಕೆ, ಸಂಸ್ಕರಿತ ಅಡಿಕೆ ಉತ್ಪನ್ನಗಳು, ಆಮದು ಪ್ರಮಾಣಕ್ಕಿಂತ ಹೆಚ್ಚು ರಫ್ತು (export) ಆಗುತ್ತಿದ್ದು, ಭೂತಾನ್ ನಿಂದ ಕೇವಲ ಹಸಿ ಅಡಿಕೆಗೆ ಮಾತ್ರ ಅನುಮತಿ ನೀಡಲಾಗಿದೆ. ನೆರೆಯ ಭೂತಾನ್ ದೇಶವು, ಭಾರತದ (India) ಪರಂಪರಾಗತ ಮಿತ್ರ ದೇಶವಾಗಿದ್ದು, ಉಭಯ ದೇಶಗಳ ನಡುವೆ ಉತ್ತಮ ವಾಣಿಜ್ಯ ವಹಿವಾಟು ನಡೆಸಲಾಗುತ್ತಿದೆ ಎಂದಿದ್ದಾರೆ.
ಅಡಿಕೆ‌ ಬೆಲೆ ಸ್ಥಿರತ ಕಾಯ್ದುಕೊಳ್ಳಲು ನಿರಂತರ ಪ್ರಯತ್ನ
ರಾಜ್ಯ ಅಡಕೆ ಟಾಸ್ಕ್ ಫೋರ್ಸ್ ಅಧ್ಯಕ್ಷರೂ ಆಗಿರುವ ಸಚಿವರು, ಅಡಿಕೆ ಮಾರುಕಟ್ಟೆಯಲ್ಲಿ ಸ್ಥಿರತೆಯನ್ನು ಕಾಯ್ದುಕೊಳ್ಳಲು ಕೇಂದ್ರ ಸರಕಾರದ ಜತೆಗೆ ಸತತ ಸಂಪರ್ಕದಲ್ಲಿದ್ದು, ಭೂತಾನ್ ಅಡಿಕೆ ಆಮದು ವಿಚಾರವಾಗಿಯೂ ಮಾತುಕತೆ ನಡೆಸಲಾಗುವುದು ಬೆಳೆಗಾರರಿಗೆ ಯಾವುದೇ ಗೊಂದಲ ಆತಂಕ ಬೇಡ‌ ಎಂದು ಸಚಿವರು ಅಭಯ ನೀಡಿದ್ದಾರೆ.
ಈ ವಿಚಾರ ಕುರಿತು, ಕೇಂದ್ರಕ್ಕೆ ಮನವರಿಕೆ ಮಾಡಿ ಕೊಡಲು ಲೋಕ ಸಭಾ ಸದಸ್ಯರ ನೇತೃತ್ವದಲ್ಲಿ, ನಿಯೋಗವೊಂದನ್ನು ಕೊಂಡೊಯ್ಯಲಾಗುವುದು ಎಂದೂ ತಿಳಿಸಿದ್ದಾರೆ.

https://suddikanaja.com/2022/09/30/today-arecanut-rate-in-karnataka-112/

Leave a Reply

Your email address will not be published. Required fields are marked *

error: Content is protected !!