Bus Pass | ಕಟ್ಟಡ ಕಾರ್ಮಿಕರಿಗೆ ಗುಡ್ ನ್ಯೂಸ್, ಉಚಿತ ಬಸ್‍ ಪಾಸ್, ಯಾರೆಲ್ಲ‌ ಅರ್ಹರು, ಎಷ್ಟು ಕಿಮೀ ಪ್ರಯಾಣ?

Public Notice

 

 

HIGHLIGHTS

  • ಕೆ.ಎಸ್.ಆರ್.ಟಿಸಿ ಬಸ್ ಪ್ರಯಾಣಕ್ಕೆ ಬಸ್ ಪಾಸ್ ಸೌಲಭ್ಯ
  • ಪ್ರಾರಂಭಿಕ ಬಸ್ ನಿಲ್ದಾಣದಿಂದ 45 ಕಿಮೀ ಪ್ರಯಾಣ ಅವಕಾಶ
  • ಬಸ್‍ ಪಾಸಿನ ಮಾನ್ಯತಾ ಅವಧಿಯು ಮೂರು ತಿಂಗಳು

ಸುದ್ದಿ ಕಣಜ.ಕಾಂ | DISTRICT | 07 OCT 2022
ಶಿವಮೊಗ್ಗ(shivamogga): ಜಿಲ್ಲೆಯಲ್ಲಿನ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಉಚಿತ KSRTC ಬಸ್‍ಪಾಸ್ ಸೌಲಭ್ಯವನ್ನು ಪಡೆದುಕೊಳ್ಳಲು ಗ್ರಾಮ ಒನ್ (grama one) ಮತ್ತು ಕರ್ನಾಟಕ ಒನ್ (Karnataka one) ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.

READ | ಎಚ್.ಕೆ.ಜಂಕ್ಷನ್ ಬಳಿ ಏಳೆಂಟು ಮಂಗಗಳ ಸಾವು, ಜನರಲ್ಲಿ ಆತಂಕ

ಪಾಸ್ ಪಡೆಯಲು ಯಾವುದೇ ಶುಲ್ಕ ಇರುವುದಿಲ್ಲ. ಅರ್ಜಿಯೊಂದಿಗೆ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಪಡೆದ ಗುರುತಿನ ಚೀಟಿ, ಆಧಾರ್ ಕಾರ್ಡ್ ಸಲ್ಲಿಸಿ ಅಲ್ಲಿಯೇ ಸ್ಮಾರ್ಟ್ ಕಾರ್ಡ್ ಮಾದರಿಯ ಬಸ್‍ಪಾಸ್‍ಗಳನ್ನು ಪಡೆದುಕೊಳ್ಳಬಹುದು.
ಹೊಂದಿರಬೇಕಾದ ಅರ್ಹತೆಗಳೇನು?
ಬಸ್‍ ಪಾಸ್‍ಗಾಗಿ ಅರ್ಜಿ ಸಲ್ಲಿಸುವ ಕಾರ್ಮಿಕರು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಣಿಯಾಗಿರಬೇಕು. ನೋಂದಣಿ ಚಾಲ್ತಿಯಲ್ಲಿರಬೇಕು. ಪಾಸುದಾರರು ನಗರ, ಸಾಮಾನ್ಯ/ ಹೊರವಲಯ ಹಾಗೂ ವೇಗದೂತ ಬಸ್ ಗಳಲ್ಲಿ, ಪಾಸಿನಲ್ಲಿ ನಮೂದಿಸಲಾದ ಪ್ರಾರಂಭಿಕ ಸ್ಥಳ/ ಪ್ರಾರಂಭಿಕ ಬಸ್ ನಿಲ್ದಾಣದಿಂದ 7 ಹಂತಗಳವರೆಗೆ (ಗರಿಷ್ಠ 45 ಕಿಮೀ) ನಿಗಮದ ಬಸ್’ಗಳಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶವಿರುತ್ತದೆ.
ಪಾಸ್ ಅವಧಿ ಮೂರು ತಿಂಗಳು
ಬಸ್‍ ಪಾಸಿನ ಮಾನ್ಯತಾ ಅವಧಿಯು ಮೂರು ತಿಂಗಳಾಗಿರುತ್ತದೆ. ಮೂರು ತಿಂಗಳ ಬಸ್ ಪಾಸ್ ಮಾನ್ಯತಾ ಅವಧಿ ಮುಕ್ತಾಯವಾದ ನಂತರ ಮರು ಅವಧಿಗೆ ಹೊಸದಾಗಿ ಅರ್ಜಿ ಸಲ್ಲಿಸಿ, ಸೇವಾ ಸಿಂಧು ಪೋರ್ಟಲ್ ಮೂಲಕ ಬಸ್‍ಪಾಸ್ ಪಡೆಯಲು ಅವಕಾಶ ಕಲ್ಪಿಸಲಾಗಿರುತ್ತದೆ. ಈ ಸಂದರ್ಭದಲ್ಲಿ ವಿಳಾಸವನ್ನು ಬದಲಾಯಿಸಿಕೊಳ್ಳಲು ಅವಕಾಶವನ್ನು ಕಲ್ಪಿಸಲಾಗಿದೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ತಿಳಿಸಿದ್ದಾರೆ.

https://suddikanaja.com/2022/10/06/earth-quake-felt-in-shiralakoppa/

Leave a Reply

Your email address will not be published. Required fields are marked *

error: Content is protected !!