ಸುದ್ದಿ ಕಣಜ.ಕಾಂ | DISTRICT | 13 OCT 2022
ಶಿವಮೊಗ್ಗ: ಜಿಲ್ಲೆಯಲ್ಲಿ ಹವಾಮಾನ ಇಲಾಖೆಯು ಯಲ್ಲೋ ಅಲರ್ಟ್ (yellow alert) ಘೋಷಿಸಿದ್ದು, ಐದು ದಿನ ಗುಡುಗು ಸಹಿತ ಭಾರಿ ಮಳೆಯ ಸಾಧ್ಯತೆ ಇದೆ ಎಂದು ಎಚ್ಚರಿಸಲಾಗಿದೆ.
ಅಕ್ಟೋಬರ್ 14, 15, 16 ಮತ್ತು 18ರಂದು ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ.
READ | ಇದೇ ಮೊದಲ ಬಾರಿಗೆ ಮೊಬೈಲ್ ಆ್ಯಪ್ ಮೂಲಕ ‘ಕೃಷಿ ಗಣತಿ’, ಹೇಗೆ ನಡೆಯುತ್ತೆ ಸರ್ವೇ?
ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾರಿ ಮಳೆ
ದಕ್ಷಿಣ ಒಳನಾಡು ಪ್ರದೇಶದ ಬಳ್ಳಾರಿ ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಇದೆ.
ಈ ನಾಲ್ಕು ದಿನಗಳು 64.5 ಎಂಎಂನಿಂದ 115.5 ಎಂಎಂ ವರ್ಷಧಾರೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.