ಸುದ್ದಿ ಕಣಜ.ಕಾಂ ಶಿವಮೊಗ್ಗ(Shivamogga)
2022-23ನೇ ಸಾಲಿನ ಆಡಳಿತ ನ್ಯಾಯಾಧಿಕರಣ ಯೋಜನೆಯಡಿ ಜಿಲ್ಲಾ ವ್ಯಾಪ್ತಿಗೆ ಒಳಪಡುವ 6 ಅಭ್ಯರ್ಥಿಗಳಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ಕಾನೂನು ಪದವೀಧರರಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿ ಕಾರ್ಯಕ್ರಮದಡಿ ಶಿಷ್ಯವೇತನ ನೀಡಲು ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಆನ್ಲೈನ್ https://tw.kar.nic.in ಮೂಲಕ ಅರ್ಜಿ ಸಲ್ಲಿಸಿ, ಸಲ್ಲಿಸಿದ ಅರ್ಜಿ ಪ್ರತಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಶಿವಮೊಗ್ಗ ಇಲ್ಲಿಗೆ ನವೆಂಬರ್ 30ರ ಒಳಗಾಗಿ ಸಲ್ಲಿಸಬೇಕು.
READ | ಪತ್ರಿಕೋದ್ಯಮ ವಿದ್ಯಾರ್ಥಿಗಳಿಂದ ಅಪ್ರೆಂಟಿಸ್ಶಿಪ್ ತರಬೇತಿಗೆ ಅರ್ಜಿ ಆಹ್ವಾನ
ಯಾರೆಲ್ಲ ಅರ್ಜಿ ಸಲ್ಲಿಸಬಹುದು?
- ಅಭ್ಯರ್ಥಿಯ ವಯಸ್ಸು 40 ವರ್ಷದೊಳಗಿದ್ದು ಜಿಲ್ಲೆಯ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು.
- ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕಕ್ಕೆ ಎರಡು ವರ್ಷದ ಒಳಗೆ ಕಾನೂನು ಪದವಿಯನ್ನು ಪಡೆದಿರಬೇಕು.
- ಕುಟುಂಬದ ವಾರ್ಷಿಕ ಆದಾಯ ₹2.50 ಲಕ್ಷ ಮೀರಿರಬಾರದು.
ವಕೀಲರ ಸಂಘದಲ್ಲಿ ಅಭ್ಯರ್ಥಿಯು ಹೆಸರನ್ನು ನೋಂದಾಯಿಸಿರಬೇಕು.
ಮಾಸಿಕ ₹10,000 ಶಿಷ್ಯವೇತನ
ತರಬೇತಿ ಅವಧಿ 2 ವರ್ಷಗಳಾಗಿದ್ದು ಮಾಸಿಕ ₹10,000 ಶಿಷ್ಯವೇತನ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08182-279222, 9482762350 ಅನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಚ್.ಇ. ಅಜ್ಜಪ್ಪ ತಿಳಿಸಿದ್ದಾರೆ.