Accident | ಮಲವಗೊಪ್ಪದಲ್ಲಿ ಭೀಕರ ಅಪಘಾತ, ಒಬ್ಬ ಸ್ಥಳದಲ್ಲೇ ಸಾವು

Accident

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಮಲವಗೊಪ್ಪ(Malavagoppa)ದಲ್ಲಿ ಮಿನಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕಿನಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

READ | ಕೆಎಂಎಫ್ ನಲ್ಲಿ 487 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ

ಬಿಬಿ ಸ್ಟ್ರೀಟ್’ನ ಚಂದ್ರಶೇಖರ್(65) ಮೃತಪಟ್ಟಿದ್ದು, ಅದೇ ಬೈಕಿನಲ್ಲಿದ್ದ ಮತ್ತೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಶಿವಮೊಗ್ಗದಿಂದ ಭದ್ರಾವತಿಯ ಕಡೆಗೆ ತೆರಳುತ್ತಿದ್ದ ಮಿನಿ ಲಾರಿಯು ಬೈಕಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದು, ಚಂದ್ರಶೇಖರ್ ಅವರ ಮೇಲೆಯೇ ಲಾರಿ ಹತ್ತಿದೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಬಳಿಕ ಶವವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ. ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!