Key answer | ಡಿಸಿಸಿ ಬ್ಯಾಂಕ್ ಪರೀಕ್ಷೆಯ ಕೀ-ಉತ್ತರ ಪ್ರಕಟ ಆಕ್ಷೇಪಣೆಗಳಿದ್ದರೆ ಸಲ್ಲಿಸಿ

OMR answer sheet

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಶಿವಮೊಗ್ಗ ಜಿಲ್ಲಾ ಸಹಕಾರ ಬ್ಯಾಂಕ್ ನಿಯಮಿತ (ಡಿಸಿಸಿ) ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಇದೇ ನವೆಂಬರ್ 12 ಮತ್ತು 13ರಂದು ಪರೀಕ್ಷೆಗಳನ್ನು ನಡೆಸಿದ್ದು, ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಹಾಗೂ ಕೀ-ಉತ್ತರವನ್ನು ಬಿಡುಗಡೆ ಮಾಡಲಾಗಿದೆ. ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಸಲ್ಲಿಸುವಂತೆ ಕೋರಲಾಗಿದೆ.

READ | ಇದೇ ತಿಂಗಳು ನಡೆಯಲಿದೆ ಡಿಸಿಸಿ ಬ್ಯಾಂಕ್ ಪರೀಕ್ಷೆ, ಎಲ್ಲೆಲ್ಲಿ ನಡೆಯಲಿಎ ಎಕ್ಸಾಂ?

ಎಲ್ಲಿ ಕೀ ಉತ್ತರ ಲಭ್ಯ?
ಡಿಸಿಸಿ ಬ್ಯಾಂಕಿನ ವೆಬ್‍ಸೈಟ್ www.shimogadccbank.com ನಲ್ಲಿ ಪ್ರಕಟಿಸಲಾಗಿದೆ. ಈ ಕುರಿತು ಯಾವುದೇ ತಕರಾರುಗಳಿದ್ದಲ್ಲಿ ಅಭ್ಯರ್ಥಿಗಳು ನ.25ರೊಳಗಾಗಿ ಬ್ಯಾಂಕಿನ ಪ್ರಧಾನ ಕಚೇರಿಗೆ ಲಿಖಿತವಾಗಿ ಸಲ್ಲಿಸಬಹುದೆಂದು ಶಿವಮೊಗ್ಗ ಡಿ.ಸಿ.ಸಿ ಬ್ಯಾಂಕ್ ನ ವ್ಯವಸ್ಥಾಪಕ ನಿರ್ದೇಶಕರು ಹಾಗೂ ನೇಮಕಾತಿ ಸಮಿತಿ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!