Veterinary recruitment | 400 ಪಶು ವೈದ್ಯಾಧಿಕಾರಿಗಳ ನೇಮಕಾತಿಯ ಬಗ್ಗೆ ಪ್ರಭು ಚವ್ಹಾಣ್ ಹೇಳಿದ್ದೇನು?

prabhu chawhan

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಪಶುಪಾಲನಾ ಇಲಾಖೆಯಲ್ಲಿ ವೈದ್ಯಕೀಯ ಸಿಬ್ಬಂದಿ ಕೊರತೆ ಇದ್ದು, ಈಗಾಗಲೇ 400 ವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಹೇಳಿದರು.

READ | 31 ಗೋವುಗಳನ್ನು ದತ್ತು ಪಡೆದ ಚಿತ್ರನಟ ಸುದೀಪ್

ಶಿವಮೊಗ್ಗ ಸಮೀಪದ ಹುಣಸೋಡು ಗ್ರಾಮದಲ್ಲಿ ಕರ್ಕಿ ಶ್ರೀಮಠದ ಸಹಕಾರದೊಂದಿಗೆ ನಡೆಯುತ್ತಿರುವ ಜ್ಞಾನೇಶ್ವರಿ ಗೋಶಾಲೆಗೆ ಭೇಟಿ ನೀಡಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪಶು ವೈದ್ಯಾಧಿಕಾರಿಗಳ ಆಯ್ಕೆಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಾಗಿದೆ. ಪ್ರಕರಣ ಇತ್ಯರ್ಥಗೊಂಡ ನಂತರ ನೇಮಕಗೊಂಡ ಅಭ್ಯರ್ಥಿಗಳಿಗೆ ಕರ್ತವ್ಯದ ಮೇಲೆ ಹಾಜರಾಗಲು ಸೂಚನಾಪತ್ರ ರವಾನಿಸಲಾಗುವುದು ಎಂದರು.
ಒಟ್ಟು ಖಾಲಿ ಇರುವ 900ಕ್ಕೂ ಹೆಚ್ಚು ಹುದ್ದೆಗಳ ಪೈಕಿ 400 ಹುದ್ದೆಗಳ ಭರ್ತಿಗೆ ಅನುಮೋದನೆ ನೀಡಲಾಗಿತ್ತು. ಆರ್ಥಿಕ ಇಲಾಖೆಯ ಮೂಲಕ ಪ್ರಸ್ತಾವನೆಗೆ ಸಹಮತಿ ಪಡೆಯಲಾಗಿತ್ತು. ಈ ಮೂಲಕ ಸರ್ಕಾರ ನೇಮಕಾತಿಗೆ ಮುಂದಾಗಿತ್ತು.
ಈ ವೇಳೆ, ಶಿವಮೊಗ್ಗದ ಸುರಭಿ ಗೋಶಾಲೆಯ ಮುಖ್ಯಸ್ಥ ನಟರಾಜ್ ಭಾಗ್ವತ್, ಮಹಾವೀರ ಗೋಶಾಲೆಯ ಮುಖ್ಯಸ್ಥ ಬಾಬುಲಾಲ್ ಜೈನ್, ಜ್ಞಾನೇಶ್ವರಿ ಗೋಶಾಲೆಯ ಮುಖ್ಯಸ್ಥ ಚಂದ್ರಹಾಸ ರಾಯ್ಕರ್ ಹಾಗೂ ಸೋಮೇಶ್ ಮತ್ತಿತರರು ಉಪಸ್ಥಿತರಿದ್ದರು.

error: Content is protected !!