
ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಸಮಾಜ ಕಲ್ಯಾಣ ಇಲಾಖೆಯು 2022-23ನೇ ಶೈಕ್ಷಣಿಕ ಸಾಲಿಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿನ ವಸತಿ ಶಾಲಾ/ ಕಾಲೇಜುಗಳ 6 ರಿಂದ 12ನೇ ತರಗತಿಯ ಎಲ್ಲ ವಿದ್ಯಾರ್ಥಿನಿಯರಿಗೆ ಸ್ವಯಂ ರಕ್ಷಣಾ ಕೌಶಲ್ಯಗಳ ತರಬೇತಿ ನೀಡಲು ಅರ್ಹ ಸಂಸ್ಥೆ, ತರಬೇತುದಾರರಿಂದ ಅರ್ಜಿ ಆಹ್ವಾನಿಸಿದೆ.
READ | ಹಿಂದೂ ಹರ್ಷ ಹತ್ಯೆ ಪ್ರಕರಣದ ಮತ್ತೊಬ್ಬ ಆರೋಪಿಗೆ ಜಾಮೀನು
ಆಸಕ್ತಿಯುಳ್ಳ ಸಂಸ್ಥೆ, ತರಬೇತುದಾರರು ಅರ್ಜಿಯನ್ನು ಅವಶ್ಯ ದಾಖಲೆಗಳೊಂದಿಗೆ ನವೆಂಬರ್ 30 ರೊಳಗಾಗಿ ಶಿವಮೊಗ್ಗ ಜಿಲ್ಲೆಯ ಮೊರಾರ್ಜಿ ದೇಸಾಯಿ/ ಕಿತ್ತೂರು ರಾಣಿ ಚೆನ್ನಮ್ಮ/ ಅಟಲ್ ಬಿಹಾರಿ ವಾಜಪೇಯಿ/ಇಂದಿರಾ ಗಾಂಧಿ/ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಗಳಿಗೆ ಖುದ್ದು ಭೇಟಿ ನೀಡಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.