ಸುದ್ದಿ ಕಣಜ.ಕಾಂ | KARNATAKA NEWS
ಶಿವಮೊಗ್ಗ: ಒಕ್ಕಲಿಗ ಸಮುದಾಯದಲ್ಲಿ ಮೀಸಲಾತಿ ಬಗ್ಗೆ ಇರುವ ಗೊಂದಲಗಳನ್ನು ಕೇಂದ್ರ ಸರ್ಕಾರದೊಂದಿಗೆ ಚರ್ಚಿಸಿ ನಿವಾರಿಸುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದರು.
ಕುವೆಂಪು ರಂಗಮಂದಿರದಲ್ಲಿ ಗುರುವಾರ ಆಯೋಜಿಸಿದ್ದ ಜಿಲ್ಲಾ ಒಕ್ಕಲಿಗರ ಸಂಘದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಒಕ್ಕಲಿಗ ಸಮುದಾಯದ ಮೀಸಲಾತಿ ಹೆಚ್ಚಳದ ಬಗ್ಗೆ ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಹೇಳಿದರು.
ಒಕ್ಕಲಿಗ ಸಮಾಜಕ್ಕೆ 3ಎ ಅಡಿಯಲ್ಲಿ ಶೇ.4ರಷ್ಟು ಮೀಸಲಾತಿ ನೀಡಲಾಗಿದೆ. ಈ ಪ್ರಮಾಣವನ್ನು ಶೇ.12ಕ್ಕೆ ಹೆಚ್ಚಿಸಬೇಕು.
| ಬಾಲಕೃಷ್ಣ, ರಾಜ್ಯಾಧ್ಯಕ್ಷ, ಒಕ್ಕಲಿಗರ ಸಂಘ
ಕೇಂದ್ರದ ಓಬಿಸಿ ಪ್ರಮಾಣ ಪತ್ರ ನೀಡಲು ತಾರತಮ್ಯ
ಒಕ್ಕಲಿಗ ಸಮುದಾಯಕ್ಕೆ ನೀಡಲಾಗುವ ಓಬಿಸಿ ಪ್ರಮಾಣ ಪತ್ರವನ್ನು ನೀಡುವಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದೆ. ಪ್ರಮಾಣಪತ್ರದ ಬಗ್ಗೆ ಇರುವ ಈ ಎಲ್ಲ ಗೊಂದಲಗಳನ್ನು ನಿವಾರಿಸಬೇಕು ಎಂದು ಮನವಿ ಮಾಡಿದರು.
ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಶ್ರೀ ಪ್ರಸನ್ನನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಸಂಸದ ಬಿ.ವೈ.ರಾಘವೇಂದ್ರ, ಗೃಹ ಸಚಿವ ಆರಗ ಜ್ಞಾನೇಂದ್ರ, ಶಾಸಕರಾದ ಜೀವರಾಜ್, ಅಶೋಕ್ ನಾಯ್ಕ್, ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಬಾಲಕೃಷ್ಣ, ಜಿಲ್ಲಾಧ್ಯಕ್ಷ ಶ್ರೀಕಾಂತ್, ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ ಸೇರಿದಂತೆ ಇತರರು ಉಪಸ್ಥಿತರಿದ್ದರು.