ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ನಿಕಟ ಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (BS Yediyurappa) ಅವರು ಸೋಗಾನೆಯಲ್ಲಿ ನಿರ್ಮಾಣ ಹಂತದಲ್ಲಿರುವ ವಿಮಾನ ನಿಲ್ದಾಣ ಕಾಮಗಾರಿಗಳನ್ನು ವೀಕ್ಷಿಸಿದರು.
VIDEO REPORT | ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿಗಳ ಬಗ್ಗೆ ಮಾಹಿತಿ ನೀಡಿದ ಬಿ.ಎಸ್.ಯಡಿಯೂರಪ್ಪಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿಗಳ ಬಗ್ಗೆ ಮಾಹಿತಿ ನೀಡಿದ ಬಿ.ಎಸ್.ಯಡಿಯೂರಪ್ಪ
READ | ವಧು ಹುಡುಕಿ ಕೊಡುವಂತೆ ಎಸ್.ಪಿಗೆ ಮನವಿ ಪತ್ರ ನೀಡಿದ ವ್ಯಕ್ತಿ, ಭಾರಿ ವೈರಲ್ ಆಯ್ತು ಲೆಟರ್
ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ಅಧಿಕಾರಿಗಳಿಂದ ಮಾಹಿತಿಯನ್ನು ಪಡೆಯಲಾಗಿದ್ದು, ಡಿಸೆಂಬರ್ ಅಂತ್ಯಕ್ಕೆ ಎಲ್ಲ ಕಾಮಗಾರಿಗಳು ಪೂರ್ಣಗೊಳ್ಳಲಿವೆ ಎಂಬ ಭರವಸೆ ನೀಡಿದ್ದಾರೆ. 15 ದಿನ ಹೆಚ್ಚು ಕಡಿಮೆ ಆಗಬಹುದು ಎಂದು ಹೇಳಿದರು.
ಎರಡು ವರ್ಷದಲ್ಲಿ ಕಾಮಗಾರಿ ಪೂರ್ಣಗೊಳ್ಳುವ ಹಂತಕ್ಕೆ ತಲುಪಿದೆ. ಇದಕ್ಕಾಗಿ ಶ್ರಮಿಸಿದ ಎಲ್ಲರಿಗೂ ಧನ್ಯವಾದಗಳನ್ನು ಹೇಳಬಯಸುತ್ತೇನೆ. ಶಿವಮೊಗ್ಗ ವಿಮಾನ ನಿಲ್ದಾಣದ್ದು ರಾಜ್ಯದ ಎರಡನೇ ಅತಿ ದೊಡ್ಡ ರನ್ ವೇಯಾಗಿದೆ. ವಿಮಾನ ನಿಲ್ದಾಣ ಉದ್ಘಾಟನೆ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕರೆಸಲಾಗುವುದು.
| ಬಿ.ಎಸ್.ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ
ಯಾವ್ಯಾವ ಕಾಮಗಾರಿಗಳು ಪೂರ್ಣ?
- ಪೆರಿಫರಲ್ ರಸ್ತೆ 8 ಕಿ.ಮೀ ಪೂರ್ಣ
- ಎಫ್ರಾನ್ ಕಾಮಗಾರಿ ಪೂರ್ಣ
- ಎಟಿಸಿ ಕಟ್ಟಡ 8 ಮಹಡಿ ಪೂರ್ಣ
- 10 ವಾಚ್ ಟಾವರ್ ಪೂರ್ಣ
- 2 ಎಲೆಕ್ಟ್ರಿಕಲ್ ಸಬ್ ಸ್ಟೇಷನ್ ಪೂರ್ಣ
ನಿರಂತರವಾಗಿ ಕಾಮಗಾರಿಗಳು ನಡೆಯುತ್ತಿದ್ದು, ಖುದ್ದು ಬಿ.ವೈ.ರಾಘವೇಂದ್ರ ಅವರೇ ಮುತುವರ್ಜಿ ವಹಿಸಿ ಕೆಲಸಗಳನ್ನು ಮಾಡಿಸುತ್ತಿದ್ದಾರೆ ಎಂದರು.
ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಕೆ.ಬಿ.ಅಶೋಕ ನಾಯ್ಕ್, ಸೂಡಾ ಮಾಜಿ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.
https://suddikanaja.com/2022/11/25/todays-shivamogga-news-one-click-many-news/