
ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯು ನವೆಂಬರ್ 15ರಂದು ಬೆಳಗ್ಗೆ 10 ಗಂಟೆಗೆ ರಾಷ್ಟ್ರೀಯ ವೃತ್ತಿ ಸೇವೆ(ಎನ್ಸಿಎಸ್) ಯೋಜನೆಯಡಿ ಸಾಗರ ರಸ್ತೆಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪೆನಿಗಳು ಭಾಗವಹಿಸಲಿದ್ದು ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ.
READ | ಶಿವಮೊಗ್ಗ ಬಗ್ಗೆ ನಡೆಯಲಿದೆ ಸುಲಲಿತ ಜೀವನ ನಿರ್ವಹಣೆ ಸೂಚ್ಯಂಕ ಸರ್ವೇ, ನೀವೂ ಓಟ್ ಮಾಡಬಹುದು
ಅಭ್ಯರ್ಥಿಗಳ ಗಮನಕ್ಕೆ
ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ತಮ್ಮ ಬಯೋಡೇಟಾ (ರೆಸ್ಯೂಮ್) ಮತ್ತು ಆಧಾರ್ ಕಾರ್ಡ್ ಪ್ರತಿ ತೆಗೆದುಕೊಂಡು ಸಂದರ್ಶನದಲ್ಲಿ ಭಾಗವಹಿಸಬಹುದು. ಪ್ರವೇಶ ಉಚಿತವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಶಿವಮೊಗ್ಗ ದೂ.ಸಂ: 08182-255293, 9380663606 / 9482023412 ನ್ನು ಸಂಪರ್ಕಿಸುವಂತೆ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.