Jobs in shimoga | ಶಿವಮೊಗ್ಗದ ಪಶುವೈದ್ಯಕೀಯ ಕಾಲೇಜಿನಲ್ಲಿ ಉದ್ಯೋಗ, ಮಾಸಿಕ 57,600 ರೂ. ವೇತನ

veternary college shivamogga

 

 

ಸುದ್ದಿ ಕಣಜ.ಕಾಂ | JOB JUNCTION
ಶಿವಮೊಗ್ಗ(shivamogga): ಪಶುವೈದ್ಯಕೀಯ ಮಹಾವಿದ್ಯಾಲಯ(Veterinary college)ವು ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಪ್ರಾಣಿ ಅನುವಂಶೀಯತೆ ಮತ್ತು ತಳಿಶಾಸ್ತ್ರ ವಿಭಾಗದಲ್ಲಿ ಹಾಗೂ ಪಶುವೈದ್ಯಕೀಯ ಚಿಕಿತ್ಸಾ ಸಂಕೀರ್ಣಶಾಸ್ತ್ರ ವಿಭಾಗದಲ್ಲಿರುವ ತಲಾ ಒಂದು ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು ಉದ್ದೇಶಿಸಿದೆ. ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳು ಕೂಡಲೆ ಅರ್ಜಿ ಸಲ್ಲಿಸಬಹುದು.

JOBS FB Linkಮಾಸಿಕ 57,600 ರೂ. ವೇತನ
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 57,600 ರೂಪಾಯಿ ವೇತನ ನೀಡಲಾಗುವುದು. ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ನೇಮಕಾತಿ ಹೊಂದಿದ ಅಭ್ಯರ್ಥಿಗಳು ಸಂಬಂಧಪಟ್ಟ ವಿಭಾಗ, ಪಶುವೈದ್ಯಕೀಯ ಚಿಕಿತ್ಸಾ ಸಂಕೀರ್ಣ, ಜಾನುವಾರು ಸಾಕಾಣಿಕಾ ಸಂಕೀರ್ಣ ಅಥವಾ ಇನ್ಯಾವುದೇ ಘಟಕಗಳಲ್ಲಿ ಪೂರ್ಣಕಾಲಿಕವಾಗಿ ಕಾರ್ಯನಿರ್ವಹಿಸಲು ಸಿದ್ಧರಿರಬೇಕು.
ನೇಮಕಾತಿಯಲ್ಲಿ ಭಾಗವಹಿಸಲಿಚ್ಚಿಸುವ ಅಭ್ಯರ್ಥಿಗಳು ಸಂಬಂಧಿಸಿದ ವಿಷಯದಲ್ಲಿ ಭಾರತೀಯ ಪಶುವೈದ್ಯಕೀಯ ಪರಿಷತ್ತಿನಿಂದ ಮಾನ್ಯತೆ ಹೊಂದಿರುವ ಮಹಾವಿದ್ಯಾಲಯಗಳಿಂದ ಪಶುವೈದ್ಯಕೀಯ ಅಥವಾ ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ ಅಡಿಯಲ್ಲಿ ಬರುವ ಸಂಸ್ಥೆಗಳಿಂದ ಪದವಿ ಪಡೆದಿರಬೇಕು.

READ | ಬಿಎಸ್ಸಿ, ಎಂಜಿನಿಯರಿಂಗ್ ಪದವಿಧರರಿಗೆ ಅರಣ್ಯ ಇಲಾಖೆಯಲ್ಲಿ ಉದ್ಯೋಗ ಅವಕಾಶ, ಕೂಡಲೇ ಅರ್ಜಿ ಸಲ್ಲಿಸಿ 

ನ.7ರಂದು ಸಂದರ್ಶನ
ನವೆಂಬರ್ 7ರಂದು ಬೆಳಗ್ಗೆ 11 ಗಂಟೆಗೆ ನಡೆಯುವ ಸಂದರ್ಶನದಲ್ಲಿ ಭಾಗವಹಿಸಬಹುದು. ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಸ್ವ ವಿವರವನ್ನು ಭರ್ತಿ ಮಾಡಿ ಅರ್ಹತಾ ದಾಖಲೆಗಳನ್ನು ಸಂದರ್ಶನದ ಸಂದರ್ಭದಲ್ಲಿ ಸಲ್ಲಿಸಬೇಕು. ಸಂದರ್ಶನ ದಿನದಂದು ಬೆಳಿಗ್ಗೆ 10ಗಂಟೆಯೊಳಗಾಗಿ ಸ್ಥಳದಲ್ಲಿ ಹಾಜರಿದ್ದು, ಹೆಸರನ್ನು ನೋಂದಾಯಿಸಿಕೊಳ್ಳಬೇಕು.
ಮಾಹಿತಿಗಾಗಿ ಪಶುವೈದ್ಯಕೀಯ ಮಾಹವಿದ್ಯಾಲಯದ ಡೀನ್ ಇವರನ್ನು ಅಥವಾ ದೂರವಾಣಿ ಸಂಖ್ಯೆ 08182-200872 ಅನ್ನು ಸಂಪರ್ಕಿಸಬಹುದಾಗಿದೆ.

error: Content is protected !!