ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಮೊಸರಳ್ಳಿ- ಭದ್ರಾವತಿ ನಡುವಿನ ಶಿವನಿ ಕ್ರಾಸ್ ಬಳಿ ರೈಲ್ವೆ ಕ್ರಾಸಿಂಗ್ ಗೇಟ್ ಸಂಖ್ಯೆ 30 ಅನ್ನು ತಾಂತ್ರಿಕ ಕಾರಣಕ್ಕಾಗಿ ನವೆಂಬರ್15ರಂದು ಬೆಳಗ್ಗೆ 6ರಿಂದ ರಾತ್ರಿ 10ರವರೆಗೆ ಮುಚ್ಚುವಂತೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಆದೇಶಿಸಿದ್ದಾರೆ.
ಪರ್ಯಾಯ ಮಾರ್ಗ
ಈ ಅವಧಿಯಲ್ಲಿ ವಾಹನ ಸವಾರರು ಮಾರುತಿ ನಗರದಲ್ಲಿರುವ ಲೆವೆಲ್ ಕ್ರಾಸ್ ಸಂಖ್ಯೆ 29 ರ ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ.