
ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಪರಿಶಿಷ್ಟ ವರ್ಗಗಳ ನಿರುದ್ಯೋಗಿ ಯುವಕ, ಯುವತಿಯರಿಗೆ ಇಲ್ಲಿದೆ ಶುಭ ಸುದ್ದಿ. ಅಲ್ಪಾವಧಿ ಸರ್ಟಿಫಿಕೇಟ್ ಕೋರ್ಸ್ ನೀಡಲಾಗುತ್ತಿದ್ದು, ಅಭ್ಯರ್ಥಿಗಳು ಇದರ ಸದುಪಯೋಗ ಪಡೆಯಬಹುದಾಗಿದೆ.
READ | ಖಾಸಗಿ ಬಸ್ ಮಾಲೀಕರಿಗೆ ಎಸ್ಪಿ ನೀಡಿದ ಎಂಟು ಪ್ರಮುಖ ಸೂಚನೆಗಳಿವು
ಏನು ಕೋರ್ಸ್, ಎಷ್ಟು ಜನರಿಗೆ?
ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2022-23ನೇ ಸಾಲಿಗೆ ಪರಿಶಿಷ್ಟ ವರ್ಗದ 1,500 ನಿರುದ್ಯೋಗಿ ಯುವಕ, ಯುವತಿಯರಿಗೆ NABH (National Accreditation Board for Hospitals & Healthcare Providers) ಪ್ಯಾರಾ ಮೆಡಿಕಲ್ ಸ್ಕಿಲ್ ಮತ್ತು ನಾನ್ ಪ್ಯಾರಾ ಮೆಡಿಕಲ್ ಅಲ್ಪಾವಧಿ ಸರ್ಟಿಫಿಕೇಟ್ ಕೋರ್ಸ್ ಗಳ ವಸತಿ ಸಹಿತ ತರಬೇತಿ ನೀಡಲು ಅರ್ಜಿಯನ್ನು ಆಹ್ವಾನಿಸಿದೆ.
ಆಸಕ್ತ ಅರ್ಹ ಪರಿಶಿಷ್ಟ ವರ್ಗಗಳ ಅಭ್ಯರ್ಥಿಗಳು ಇಲಾಖೆಯ ವೆಬ್ಸೈಟ್ www.sw.kar.nic.in ಮೂಲಕ ಅರ್ಜಿ ಸಲ್ಲಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.