Power cut | ಡಿ.3ರಂದು ಶಿವಮೊಗ್ಗದ ಕೆಲವೆಡೆ ಕರೆಂಟ್ ಇರಲ್ಲ, ಯಾವ ಪ್ರದೇಶದಲ್ಲಿ ಪವರ್ ಕಟ್?

IMG 20220521 162055 149

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಶಿವಮೊಗ್ಗ ತಾಲ್ಲೂಕು ಕುಂಸಿ ಗ್ರಾಮದ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರಕ್ಕೆ ವಿದ್ಯುತ್ ಪೂರೈಸುವ ಮಾರ್ಗದ ಕಾರ್ಯ ಹಾಗೂ ತುರ್ತು ಕಾಮಗಾರಿ ಇರುವುದರಿಂದ ಕುಂಸಿ ವ್ಯಾಪ್ತಿಗೆ ಬರುವ ಪ್ರದೇಶಗಳಲ್ಲಿ ಡಿಸೆಂಬರ್ 3ರಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

READ | 24 ಗಂಟೆಯೊಳಗೆ ಪ್ರಕರಣ ಬೇಧಿಸಿದ ಪೊಲೀಸ್, ಮೊಬೈಲ್ ಶಾಪಿಗೆ ಕನ್ನ ಹಾಕಿದ ಆರೋಪಿ ಅರೆಸ್ಟ್

ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಕನಕ ನಗರ, ಪೊಲೀಸ್ ವಸತಿ ಗೃಹ, ಇಂದಿರಾ ಕಾಲೋನಿ, ಚೋರಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಎಲ್ಲ ಹಳ್ಳಿಗಳು, ತುಪ್ಪೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಎಲ್ಲ ಹಳ್ಳಿಗಳು ಮತ್ತು ಶಿಕಾರಿಪುರ ಮಾಸ್ತಿಬೈಲು ಹಳ್ಳಿ, ದೊಡ್ಡಿಮಟ್ಟಿ ಗ್ರಾಮಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

https://suddikanaja.com/2022/11/29/kuvempu-university-extended-admission-date/

error: Content is protected !!