ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ತಾಲೂಕಿನ ಸಂತೇಕಡೂರು ವಿವಿ ವಿತರಣಾ ಕೇಂದ್ರದ ಉಂಬ್ಳೇಬೈಲು ಮಾರ್ಗದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನವೆಂಬರ್ 16ರಂದು ಬೆಳಗ್ಗೆ 10 ರಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ಪವರ್ ಕಟ್?
ಲಕ್ಕಿನಕೊಪ್ಪ, ತೋಟದಕೆರೆ, ಹುರಳಹಳ್ಳಿ, ಗಣಿದಾಳು, ಉಂಬ್ಳೇಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಲು, ಕಾಕನಹಸೂಡಿ, ಲಿಂಗಾಪುರ, ಸಿದ್ದಮ್ಮಾಜಿ ಹೊಸೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ಮನವಿ ಮಾಡಿದೆ.