ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ನಗರದ ಹಲವು ಪ್ರದೇಶಗಳಲ್ಲಿ ಡಿ.15ರಂದು ವಿದ್ಯುತ್ ವ್ಯತ್ಯಯವಾಗಲಿದೆ.
ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಈ ಪ್ರದೇಶದ ವ್ಯಾಪ್ತಿಗೊಳಪಡುವ ಪ್ರದೇಶಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 3ರ ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
READ | 13/12/2022ರ ಅಡಿಕೆ ಧಾರಣೆ ಯಾವ ಮಾರುಕಟ್ಟೆಯಲ್ಲಿ ಎಷ್ಟು ಬೆಲೆ ಇದೆ?
ಎಲ್ಲೆಲ್ಲಿ ವ್ಯತ್ಯಯ?
ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ನಗರ ಉಪ ವಿಭಾಗ 2ರ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶ್ರೀರಾಂಪುರ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಫ್ಲೈ ಓವರ್ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಈ ಪ್ರದೇಶದ ವ್ಯಾಪ್ತಿಗೊಳಪಡುವ ಪ್ರದೇಶಗಳಲ್ಲಿ ಡಿ.15ರಂದು ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ವ್ಯತ್ಯಯ?
ಶ್ರೀರಾಂಪುರ, ಗಾಜನೂರು ಭಾಗದ ಬಿ.ಎಸ್.ಎನ್.ಎಲ್ ಲೇಔಟ್, ವೀರಣ್ಣ ಬೆನವಳ್ಳಿ, ವೀರಗಾರನ ಭೈರನಕೊಪ್ಪ, ಭೂಮಿಕಾ ಅಲಾಯ್ಸ್, ಫೆಸಿಟ್ ಕಾಲೇಜ್, ಕಿಮ್ಮನೆ ಗಾಲ್ಫ್ ಕ್ಲಬ್, ಆಲದೇವರಹೊಸೂರು, ಪೊಲೀಸ್ ಲೇಔಟ್, ಗುಡ್ಡದಹರಕೆರೆ, ಇಂದಿರಾ ಬಡಾವಣೆ, ಗಿರಿದೀಪಮ್ ಸ್ಕೂಲ್ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬೆಳಗ್ಗೆ 10 ರಿಂದ ಸಂಜೆ 6ರ ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ನಗರ ಕುಂಸಿ ಪಾಲನೆ ಮತ್ತು ನಿರ್ವಹಣೆ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
https://suddikanaja.com/2022/12/14/today-gold-and-silver-rate/