ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ನಗರದ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಪೊಲೀಸ್ ಅಧೀಕ್ಷಕ ಜಿ.ಕೆ.ಮಿಥುನ್ ಕುಮಾರ್ ಅವರು ಮುಂಬರುವ ಹೊಸ ವರ್ಷ ಆಚರಣೆಯ ಸಂಬಂಧ ಹೋಟೆಲ್, ಕ್ಲಬ್ ಮತ್ತು ರೆಸೋರ್ಟ್ ಮಾಲೀಕರು ಹಾಗೂ ವ್ಯವಸ್ಥಾಪಕರ ಸಭೆಯನ್ನು ನಡೆಸಿ ಈ ಕೆಳಕಂಡ ಸೂಚನೆಗಳನ್ನು ನೀಡಿದರು.
READ | ಶಿವಮೊಗ್ಗ ನಗರದ 5 ರಸ್ತೆಗಳಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ ಸಾಧ್ಯತೆ, ಯಾವ್ಯಾವ ಮಾರ್ಗ?
ನೀಡಲಾದ ಸೂಚನೆಗಳೇನು?
- ಸರ್ಕಾರದ ಆದೇಶದ ಅನ್ವಯ ಹೊಸ ವರ್ಷ ಆಚರಣೆಯನ್ನು ಬೆಳಗಿನ ಜಾವ 1 ಗಂಟೆಯ ಒಳಗಾಗಿ ಮುಕ್ತಾಯಗೊಳಿಸುವುದು.
- ಹೊಸ ವರ್ಷದ ಆಚರಣೆಯಲ್ಲಿ ಭಾಗವಹಿಸುವ ಮಕ್ಕಳು, ವೃದ್ಧರು ಮತ್ತು ಮಹಿಳೆಯರ ಸುರಕ್ಷತೆಯ ಕುರಿತು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವುದು.
- ಸಂಭ್ರಮಾಚರಣೆಯ ವೇಳೆ ಯಾವುದೇ ರೀತಿಯ ಮಾದಕ ವಸ್ತುಗಳನ್ನು ಬಳಸಬಾರದು.
- ಮಧ್ಯ ಮಾರಾಟವನ್ನು ರಾತ್ರಿ 11:30ರ ವರೆಗೆ ಮಾತ್ರ ಮಾಡುವುದು.
- ಮಧ್ಯಪಾನ ಮಾಡಿ ವಾಹನವನ್ನು ಚಾಲನೆ ಮಾಡದೇ, ಮಧ್ಯಪಾನ ಮಾಡದೇ ಇರುವವರು ಚಾಲನೆ ಮಾಡುವುದು.
- ನಿಗದಿ ಪಡಿಸಿದ ಶಬ್ದ ಮಿತಿಯನ್ನು ಮೀರಿ ಸೌಂಡ್ ಸಿಸ್ಟಂಗಳನ್ನು ಬಳಸುವಂತಿಲ್ಲ.
- ಸಂಭ್ರಮಾಚರಣೆಗೆ ಬರುವ ಸಾರ್ವಜನಿಕರ ವಾಹನಗಳ ನಿಲುಗಡೆಗೆ ವ್ಯವಸ್ಥಿತವಾಗಿ ಪಾರ್ಕಿಂಗ್ ವ್ಯವಸ್ಥೆ ಮಾಡುವುದು.
- ಗುಂಪನ್ನು ನಿಯಂತ್ರಿಸುವ ಸಂಬಂಧ ಒಂದಕ್ಕಿಂತ ಹೆಚ್ಚು ಪ್ರವೇಶ ದ್ವಾರಗಳನ್ನು ನಿರ್ಮಿಸುವುದು.
- ಹೊಸ ವರ್ಷದ ಆಚರಣೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಮತ್ತು ಸ್ಯಾನಿಟೈಸರ್ ಅನ್ನು ಬಳಸುವುದು.
- 60 ವರ್ಷ ಮೇಲ್ಪಟ್ಟ ವೃದ್ಧರು, ಗರ್ಭಿಣಿ ಮಹಿಳೆಯರು ಮತ್ತು ಮಕ್ಕಳು ಹೊಸ ವರ್ಷದ ಆಚರಣೆಯಲ್ಲಿ ಭಾಗವಹಿಸದೇ ಇರುವುದು ಸೂಕ್ತವಾಗಿರುತ್ತದೆ.
- ನೋ ಮಾಸ್ಕ್ ನೋ ಎಂಟ್ರಿ ಬೋರ್ಡ್ ಗಳನ್ನು ಸಾರ್ವಜನಿಕರವಾಗಿ ಎದ್ದು ಕಾಣುವ ರೀತಿಯಲ್ಲಿ ಹಾಕುವುದು.
- ಹೊಸ ವರ್ಷ ಆಚರಣೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬ ಸಾರ್ವಜನಿಕರಿಗೂ ಕಡ್ಡಾಯವಾಗಿ ಥರ್ಮಲ್ ಸ್ಕ್ರೀನಿಂಗ್ ಗೆ ಒಳಪಡಿಸುವುದು.
- ಯಾವುದೇ ತುರ್ತು ಸಂದರ್ಭದಲ್ಲಿ ಅಥವಾ ಸಹಾಯಕ್ಕಾಗಿ ಕೂಡಲೇ ಹತ್ತಿರದ ಪೊಲೀಸ್ ಠಾಣೆ/ ಪೊಲೀಸ್ ಕಂಟ್ರೋಲ್ ರೂಂ ನಂಬರ್: 9480803300 / 08182-261413 ಅಥವಾ ತುರ್ತು ಸಹಾಯವಾಣಿ 112 ಗೆ ಕರೆ ಮಾಡುವುದು.
ಸಭೆಯಲ್ಲಿ ಡಿಸಿಆರ್.ಬಿ, ಶಿವಮೊಗ್ಗ ಉಪ ವಿಭಾಗದ ಡಿವೈಎಸ್.ಪಿ ಡಿಸಿಆರ್.ಬಿ ಮತ್ತು ಡಿವೈಎಸ್.ಪಿ, ಪೊಲೀಸ್ ನಿರೀಕ್ಷಕರು ಹಾಜರಿದ್ದರು.
https://suddikanaja.com/2022/12/25/pm-narendra-modi-talk-on-shivamoggas-entrepreneur-in-mann-ki-baat/