ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ-ಹಳಿಯಾಳ ಹಾಗೂ ಜೆಸಿಬಿ ಇಂಡಿಯಾ ಇವರ ಜಂಟಿ ಸಹಯೋಗದಲ್ಲಿ 30 ದಿನ ಜೆಸಿಬಿ ಆಪರೇಟರ್ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತಿದ್ದು, 18-45 ವರ್ಷ ವಯೋಮಿತಿಯೊಳಗಿನ ಯುವಕರಿಂದ ಅರ್ಜಿ ಆಹ್ವಾನಿಸಿದೆ.
READ | ರೈಲು ಪ್ರಯಾಣಿಕರಿಗೆ ಶುಭ ಸುದ್ದಿ, ಶಿವಮೊಗ್ಗ- ಬೆಂಗಳೂರು ವಿಸ್ಟಾಡೋಮ್ ಏಸಿ ಬೋಗಿ ಸಂಚಾರ ಪುನರಾರಂಭ
ಆಸಕ್ತರು ತಮ್ಮ ಹೆಸರು, ಹುಟ್ಟಿದ ದಿನಾಂಕ, ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆ, ವಿದ್ಯಾರ್ಹತೆ, ತರಬೇತಿಯ ಅವಶ್ಯಕತೆ, ಹಾಲಿ ಮಾಡುತ್ತಿರುವ ಕೆಲಸ ಇತ್ಯಾದಿ ವಿವರಗಳನ್ನೊಳಗೊಂಡ ಅರ್ಜಿಯನ್ನು ಜನವರಿ 12 ರೊಳಗಾಗಿ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸಿಟಿ, ವಿಸ್ತರಣಾ ಕೇಂದ್ರ ಹಸನಮಾಳ್, ದಾಂಡೇಲಿ-581325, ವಿಳಾಸಕ್ಕೆ ಕಳುಹಿಸುವುದು. ಅಥವಾ ಮೊ.ಸಂ.: 08284-298547/ 8050741744/ 9632143217/ 9449782425 ಗಳಿಗೆ ವಾಟ್ಸ್ಪ್ ಮೂಲಕ ಕಳುಹಿಸುವುದು.
ತರಬೇತಿಯು ಊಟೋಪಚಾರ ಹಾಗೂ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿದ್ದು, ತರಬೇತಿಯ ನಂತರ ಉದ್ಯೋಗ ನಿಯೋಜನೆ ಮಾರ್ಗದರ್ಶನ ನೀಡಲಾಗುವುದು.