
ಸುದ್ದಿ ಕಣಜ.ಕಾಂ ಭದ್ರಾವತಿ
BHADRAVATHI: ವಕ್ಫ್ ಮಂಡಳಿ ವತಿಯಿಂದ ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕವಾಗಿ ಕಾಲೇಜು ತೆರೆಯುವ ಬಗ್ಗೆ ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು.
READ | ತಿಂಗಳ ಮೊದಲ ದಿನ ಚಿನ್ನದ ಬೆಲೆ ಸ್ಥಿರ, ಇಂದು ಚಿನ್ನ, ಬೆಳ್ಳಿಯ ಬೆಲೆಯೆಷ್ಟು? ಹೇಗಿತ್ತು ನವೆಂಬರ್ ಟ್ರೆಂಡ್?
ಭದ್ರಾವತಿ ಬೊಮ್ಮನಕಟ್ಟೆ (Bommanakatte) ಹತ್ತಿರದ ಹೆಲಿಪ್ಯಾಡ್(Helipad)ನಲ್ಲಿ ಮಾಧ್ಯಮದವರೊಂದಿಗೆ ಗುರುವಾರ ಮಾತನಾಡಿದ ಅವರು, ವಕ್ಫ್ ಮಂಡಳಿ (Waqf board) ಅಧ್ಯಕ್ಷರು ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕವಾಗಿ ಕಾಲೇಜು ತೆರೆಯುವ ಬಗ್ಗೆ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿ, ಇದು ಕೇವಲ ಹೇಳಿಕೆಯಾಗಿದೆ. ಈ ರೀತಿಯ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಸ್ಪಷ್ಟಪಡಿಸಿದರು.
ಹಾಜರಾತಿ ಕಡಿಮೆ ಸತ್ಯಕ್ಕೆ ದೂರವಾದ ವಿಚಾರ
ಹಿಜಾಬ್ ನಿರ್ಣಯದ ನಂತರ ಮುಸ್ಲಿಂ ಹೆಣ್ಣು ಮಕ್ಕಳ ಹಾಜರಾತಿ ಕಡಿಮೆಯಾಗಿದೆ ಎಂಬುದಕ್ಕೆ ಪ್ರತಿಕ್ರಿಯಿಸಿ, ಇದು ಸತ್ಯಕ್ಕೆ ದೂರವಾಗಿದೆ. ವಿದ್ಯಾರ್ಥಿನಿಯರ ಹಾಜರಾತಿ ಸಂಪೂರ್ಣವಾಗಿದೆ. ರಾಜ್ಯದ ಸಾಕ್ಷರತಾ ದರ ಹೆಚ್ಚಾಗಿದ್ದು, ಅಲ್ಪಸಂಖ್ಯಾತ ಹೆಣ್ಣುಮಕ್ಕಳು ಆಸಕ್ತಿಯಿಂದ ವಿದ್ಯೆ ಕಲಿಯುತ್ತಿದ್ದಾರೆ. ಈ ವಿಷಯದಲ್ಲಿ ಯಾವುದೇ ಗೊಂದಲವಿಲ್ಲ ಎಂದರು.
Jobs in Shivamogga | ಪತ್ರಿಕೋದ್ಯಮ ಪದವೀಧರರಿಗೆ ಶಿವಮೊಗ್ಗದಲ್ಲಿ ಉದ್ಯೋಗ ಅವಕಾಶ