ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಕುಪ್ಪಳಿಯ ಕುವೆಂಪು ಕವಿಮನೆ, ಹೇಮಾಂಗಣ ಮತ್ತು ಸುತ್ತಲಿನ ಪ್ರದೇಶಗಳ ಅಭಿವೃದ್ಧಿಗೆ 1 ಕೋಟಿ ರೂ. ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ.
ರಾಷ್ಟ್ರಕವಿ ಕುವೆಂಪು ಪ್ರಾಧಿಕಾರದ ಸಮಕಾರ್ಯದರ್ಶಿ ಮತ್ತಿತರರು ಕಾಮಗಾರಿಗೆ ಸಹಾಯ ಧನ ನೀಡುವಂತೆ ಕೋರಿದ್ದರು. ಹೀಗಾಗಿ, 1 ಕೋಟಿ ರೂ. ಬಿಡುಗಡೆ ಮಾಡಲು ಆದೇಶಿಸಿರುವುದಾಗಿ ಮುಖ್ಯಮಂತ್ರಿಗಳ ಕಾರ್ಯದರ್ಶಿ ಜಯರಾಮ್ ಅವರು ತಿಳಿಸಿದ್ದಾರೆ.