ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಜಿಲ್ಲೆಯ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯ ನಾಲ್ಕು ಪ್ರಕರಣಗಳಲ್ಲಿ ಸಂತ್ರಸ್ತರಿಗೆ ಪರಿಹಾರ ನೀಡಲಾಗಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ 2018ನೇ ಸಾಲಿನಲ್ಲಿ ಆನವಟ್ಟಿ ಪೊಲೀಸ್ ಠಾಣೆಯಲ್ಲಿ ವರದಿಯಾದ ಪೋಕ್ಸೋ ಪ್ರಕರಣ, 2020ನೇ ಸಾಲಿನಲ್ಲಿ ಮಹಿಳಾ ಪೊಲೀಸ್ ಠಾಣೆ ಮತ್ತು ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವರದಿಯಾದ ಪೋಕ್ಸೋ ಪ್ರಕರಣಗಳು ಮತ್ತು 2021ನೇ ಸಾಲಿನಲ್ಲಿ ಆಗುಂಬೆ ಪೊಲೀಸ್ ಠಾಣೆಯಲ್ಲಿ ವರದಿಯಾದ ಪೋಕ್ಸೋ ಪ್ರಕರಣ ಸೇರಿದಂತೆ ಒಟ್ಟು 4 ಪ್ರಕರಣಗಳಲ್ಲಿ ಆರೋಪಿತರ ವಿರುದ್ಧ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಶಿಕ್ಷೆಯಾಗಿದ್ದು, ಸಂತ್ರಸ್ತ ಪರಿಹಾರ ನಿಧಿಯಿಂದ ನೊಂದವರಿಗೆ ಆನವಟ್ಟಿ ಪೊಲೀಸ್ ಠಾಣೆಯ ಪ್ರಕರಣದಲ್ಲಿ ₹5,00,000, ಮಹಿಳಾ ಪೊಲೀಸ್ ಠಾಣೆಯ ಪ್ರಕರಣದಲ್ಲಿ ರೂ ₹6,50,000, ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯ ಪ್ರಕರಣದಲ್ಲಿ ₹6,50,000 ಮತ್ತು ಆಗುಂಬೆ ಪೊಲೀಸ್ ಠಾಣೆಯ ಪ್ರಕರಣದಲ್ಲಿ ₹4,00,000 ಪರಿಹಾರವನ್ನು ನೀಡಲಾಗಿರುತ್ತದೆ.
https://suddikanaja.com/2022/12/15/mp-by-raghavendra-raised-an-issue-of-arecanut-at-parliment-session/