Suicide | ಪ್ರತಿಷ್ಠಿತ ಆಸ್ಪತ್ರೆಯ ಕೀಲುಮೂಳೆ ತಜ್ಞ ವೈದ್ಯ ಆತ್ಮಹತ್ಯೆ

Suicide hanging

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯ ಕೀಲು ಮೂಳೆ ತಜ್ಞ ವೈದ್ಯರೊಬ್ಬರು ತಮ್ಮ ಮನೆಯಲ್ಲಿ‌ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿರುವ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.

READ | ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕ ಕಾಲೇಜು ಪ್ರಸ್ತಾವನೆ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದೇನು?

ಗೋಪಾಳದ ಮನೆಯಲ್ಲಿ ಡಾ.ವಿ.ಎಲ್.ಲೋಲಿತ್ (36) ಆತ್ಮಹತ್ಯೆಗೆ ಶರಣಾದವರು. ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ಹರ್ಕನಳ್ಳಿ ಗ್ರಾಮದವರಾದ ಇವರು ಒಂದೂವರೆ ವರ್ಷದ ಹಿಂದೆ ಡಾ.ಸುಚಿತ್ರಾ ಎಂಬುವವರೊಂದಿಗೆ ವಿವಾಹವಾಗಿದ್ದರು. ಇವರು ಸಾಗರದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಸೂತಿ ತಜ್ಞರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರಿಗೆ ಒಂದೂವರೆ ತಿಂಗಳ ಮಗುವಿದೆ. ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!