
ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2022-23ನೇ ಸಾಲಿನ ಜಿಲ್ಲಾ ಕಚೇರಿಯಲ್ಲಿ ಕ್ಷೇತ್ರ ಪ್ರಚಾರ ಕಾರ್ಯಕ್ರಮ ಹಾಗೂ ಮಾಧ್ಯಮ ಚಟುವಟಿಕೆಗಳ ನಿರ್ವಹಣೆ ಕುರಿತು ತರಬೇತಿ ಪಡೆಯಲಿಚ್ಚಿಸುವ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
READ | ಬಾಲಕನ ಬಲಿ ಪಡೆದ ಬೀದಿನಾಯಿಗಳು ಗುಂಪು
ಹೊಂದಿರಬೇಕಾದ ಅರ್ಹತೆಗಳೇನು?
- ತರಬೇತಿ ಪಡೆಯಲಿಚ್ಚಿಸುವ ಅಭ್ಯರ್ಥಿಯು ಪತ್ರಿಕೋದ್ಯಮ ವಿಷಯದಲ್ಲಿ ಪದವಿ/ ಸ್ನಾತಕೋತ್ತರ ಪಡೆದವರಾಗಿರಬೇಕು.
- ಕನ್ನಡ, ಇಂಗ್ಲಿಷ್ ಭಾಷೆಯಲ್ಲಿ ಓದು ಮತ್ತು ಬರಹ ಬಲ್ಲವರಾಗಿದ್ದು, ಕಂಪ್ಯೂಟರ್ ಜ್ಞಾನ ಹೊಂದಿದವರಾಗಿರಬೇಕು.
- ಅಭ್ಯರ್ಥಿಗಳು ಶಿವಮೊಗ್ಗ ಜಿಲ್ಲೆಯವರಾಗಿರಬೇಕು. ಶಿವಮೊಗ್ಗ ಜಿಲ್ಲೆಯ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ನೆರೆಯ ಜಿಲ್ಲೆಯ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದು.
- ಈ ಹಿಂದೆ ಅರ್ಜಿ ಸಲ್ಲಿಸಿ, ಆಯ್ಕೆಯಾಗಿ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಅವಕಾಶವಿರುವುದಿಲ್ಲ.
ಆಯ್ಕೆ ಪ್ರಕ್ರಿಯೆ ಹೇಗೆ?
12 ತಿಂಗಳ ತರಬೇತಿ ಇದಾಗಿದ್ದು, ಪರಿಶಿಷ್ಟ ಜಾತಿಯ ಇಬ್ಬರು ಅಭ್ಯರ್ಥಿಗಳನ್ನು ಮೆರಿಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ₹15,000 ಶಿಷ್ಯವೇತನ ನೀಡಲಾಗುವುದು.
ಅರ್ಹರು ತಮ್ಮ ಸ್ವವಿವರ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು ಡಿಸೆಂಬರ್ 9ರೊಳಗಾಗಿ ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸರ್.ಎಂ.ವಿ.ರಸ್ತೆ, ಶಿವಮೊಗ್ಗ-577201 ವಿಳಾಸಕ್ಕೆ ಸಲ್ಲಿಸಬಹುದಾಗಿದೆ. ಮಾಹಿತಿಗಾಗಿ ಇಲಾಖೆಯ ಇಮೇಲ್ [email protected] ಅನ್ನು ಸಂಪರ್ಕಿಸಿ.