Jobs in shivamogga | ಕೇಂದ್ರ ಕಾರಾಗೃಹದಲ್ಲಿ ಮೂರು ಹುದ್ದೆಗಳು ಮಂಜೂರು, ಡಿ.21ರಂದು ನೇರ ಸಂದರ್ಶನ

Shivamogga Jail

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಕೇಂದ್ರ ಕಾರಾಗೃಹದಲ್ಲಿ 3 ವೈದ್ಯರ ಹುದ್ದೆಗಳು ಮಂಜೂರಾಗಿದ್ದು, ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ಅವಧಿಗೆ ನೇಮಕ ಮಾಡಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ನೇರ ಸಂದರ್ಶನ ಏರ್ಪಡಿಸಲಾಗಿದೆ.

READ | ಅಡಿಕೆ ಧಾರಣೆಯಲ್ಲಿ ದಿಢೀರ್ ಏರಿಕೆ, ರಾಶಿಗೆ ಬಂಪರ್ ಬೆಲೆ, 16/12/2022ರ ಧಾರಣೆ

ಡಿಸೆಂಬರ್ 21 ರ ಬೆಳಗ್ಗೆ 11 ರಿಂದ ಮಧ್ಯಾಹ್ನ 1.30 ರವರೆಗೆ ಎಂಬಿಬಿಎಸ್ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ನೇರ ಸಂದರ್ಶನವಿದ್ದು, ಅಭ್ಯರ್ಥಿಗಳು ಎಲ್ಲ ಮೂಲ ದಾಖಲಾತಿಗಳು ಮತ್ತು ಅವುಗಳ ದೃಢೀಕೃತ ನಕಲುಗಳ ಒಂದು ಪ್ರತಿ, ಇತ್ತೀಚಿನ ಭಾವಚಿತ್ರದೊಂದಿಗೆ ಹಾಜರಾಗಬೇಕು.
ಹೆಚ್ಚಿನ ಮಾಹಿತಿಗೆ ಕಚೇರಿ ವೇಳೆಯಲ್ಲಿ ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 08182-222382 ಅನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ರಾಜೇಶ್ ಸುರಗಿಹಳ್ಳಿ ತಿಳಿಸಿದ್ದಾರೆ.

https://suddikanaja.com/2022/12/16/shimoga-police-arrested-accused-from-other-states/

error: Content is protected !!