Ban | ಈಯರ್ ಬಡ್ಸ್ ಸೇರಿದಂತೆ 15ಕ್ಕೂ ಹೆಚ್ಚು ಸಾಮಗ್ರಿಗಳಲ್ಲಿ ಪ್ಲಾಸ್ಟಿಕ್ ಬ್ಯಾನ್!

Ear Buds

 

 

ಸುದ್ದಿ ಕಣಜ.ಕಾಂ ಶಿರಾಳಕೊಪ್ಪ
SHIRALAKOPPA: ಈಯರ್ ಬಡ್ಸ್ ಸೇರಿದಂತೆ 15ಕ್ಕೂ ಹೆಚ್ಚು ಸಾಮಗ್ರಿಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗಿದೆ ಎಂದು ಶಿರಾಳಕೊಪ್ಪ ಪುರಸಭೆ ಮುಖ್ಯಾಧಿಕಾರಿ ಹೇಮಂತ್ ಎಸ್.ಡೊಳ್ಳೆ ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ಪರಿಸರ, ಅರಣ್ಯ ಮತ್ತು ಹವಾಮಾನ ವೈಪರೀತ್ಯ ಸಚಿವಾಲಯವು ಹೊರಡಿಸಿರುವ ಅಧಿಸೂಚನೆಯಂತೆ, ಪಾಲಿಸ್ಟೈರೀನ್’ನಿಂದ ತಯಾರಿಸಿದ ಉತ್ಪನ್ನಗಳು ಮತ್ತು ಏಕ ಬಳಕೆ ಪ್ಲಾಸ್ಟಿಕ್ ಈ ಕೆಳಕಂಡ ಪ್ಲಾಸ್ಟಿಕ್ ಉತ್ಪನ್ನಗಳ ಉತ್ಪಾದನೆ, ಆಮದು, ದಾಸ್ತಾನು, ವಿತರಣೆ, ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಲಾಗಿದೆ.

READ | ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್

ಯಾವುದರ ಮೇಲೆಲ್ಲ ನಿರ್ಬಂಧ?
ಪ್ಲಾಸ್ಟಿಕ್ ಕಡ್ಡಿಗಳನ್ನು ಒಳಗೊಂಡಿರುವ ಕಿವಿಯ ಕೊಳೆ ತೆಗೆಯುವ ಈಯರ್ ಬಡ್ಸ್, ಬಲೂನ್’ಗಳಲ್ಲಿನ ಪ್ಲಾಸ್ಟಿಕ್ ಕಡ್ಡಿಗಳು, ಪ್ಲಾಸ್ಟಿಕ್ ಧ್ವಜಗಳು, ಕ್ಯಾಂಡಿ ಕಡ್ಡಿಗಳು, ಐಸ್ ಕ್ರೀಮ್ ಕಡ್ಡಿಗಳು, ಅಲಂಕಾರಕ್ಕೆ ಬಳಸುವ ಪಾಲಿಸ್ಟೈರೀನ್ (ಥರ್ಮಕೋಲ್) ಹಾಗೂ ಪ್ಲೇಟ್’ಗಳು, ಕಪ್’ಗಳು, ಗ್ಲಾಸ್’ಗಳು, ಕಟ್ಲರಿ ಚಮಚ, ಚಾಕು, ಸ್ಟ್ರಾ, ಟ್ರೇಗಳು, ಸಿಹಿ ತಿನಿಸುಗಳ ಬಾಕ್ಸ್’ಗಳ ಮೇಲಿನ ಹೊದಿಕೆ, ಆಹ್ವಾನ ಪತ್ರಿಕೆ ಮತ್ತು ಸಿಗರೇಟು ಪ್ಯಾಕೆಟ್, 100 ಮೈಕ್ರಾನ್’ಗಿಂತ ಕಡಿಮೆ ಇರುವ ಪ್ಲಾಸ್ಟಿಕ್ ಅಥವಾ ಪಿವಿಸಿ ಬ್ಯಾನರ್’ಗಳು, ಸ್ಟಿಕ್ಕರ್ಸ್’ಗಳನ್ನು ನಿಷೇಧಿಸಿದೆ.
ಶಿರಾಳಕೊಪ್ಪ ಪುರಸಭೆ ವ್ಯಾಪ್ತಿಯಲ್ಲಿ ಮೇಲ್ಕಂಡ ನಿಷೇಧಿತ ಏಕ ಬಳಕೆ ಪ್ಲಾಸ್ಟಿಕ್ ಉತ್ಪನ್ನಗಳ ಉತ್ಪಾದನೆ, ಆಮದು, ದಾಸ್ತಾನು, ವಿತರಣೆ, ಮಾರಾಟ ಮತ್ತು ಬಳಕೆ ಮಾಡುವವರಿಗೆ ದಂಡ ವಿಧಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

https://suddikanaja.com/2022/12/09/delhi-chalo-on-dec-19/

error: Content is protected !!