Power cut | ಎಂಆರ್ ಎಸ್, ತ್ಯಾವರೆಚಟ್ನಹಳ್ಳಿ ವಿದ್ಯುತ್ ವಿತರಣೆ ಕೇಂದ್ರ ವ್ಯಾಪ್ತಿಯ ಪ್ರದೇಶಗಳಲ್ಲಿ ನಾಳೆ‌ ಕರೆಂಟ್ ಇರಲ್ಲ

IMG 20220521 162055 149

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಎಂಆರ್ ಎಸ್, ತ್ಯಾವರೆಚಟ್ನಹಳ್ಳಿ ವಿದ್ಯುತ್ ವಿತರಣೆ ಕೇಂದ್ರ ವ್ಯಾಪ್ತಿಯ ಪ್ರದೇಶಗಳಲ್ಲಿ ಡಿ.29ರಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ತ್ಯಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಈ ಪ್ರದೇಶದ ವ್ಯಾಪ್ತಿಗೊಳಪಡುವ ಕುವೆಂಪುನಗರ, ಎನ್.ಇ.ಎಸ್.ಬಡಾವಣೆ, ಶಿವಬಸವನಗರ, ಇಂದಿರಾಗಾಂಧಿ ಬಡಾವಣೆ, ಜ್ಯೋತಿನಗರ, ಹಳೆಬೊಮ್ಮನಕಟ್ಟೆ, ಬೊಮ್ಮನಕಟ್ಟೆ-ಎ ಯಿಂದ ಹೆಚ್ ಬ್ಲಾಕ್, ಜೆ.ಎನ್.ಎನ್.ಸಿ. ಕಾಲೇಜು, ಪರ್ಫೆಕ್ಟ್ ಅಲಾಯನ್ಸ್ ಫ್ಯಾಕ್ಟರಿ, ರೆಡ್ಡಿ ಬಡಾವಣೆ, ಶಾಂತಿನಗರ, ಹೊನ್ನಾಳಿರಸ್ತೆ, ತಾವರೆಚಟ್ನಹಳ್ಳಿ, ಯು.ಜಿ.ಡಿ., ಶೇಷಾದ್ರಿಪುರಂ, ಲಕ್ಷ್ಮೀವೆಂಕಟೇಶ್ವರ ಸಾಮಿಲ್ಸ್, ತ್ರೀಮೂರ್ತಿನಗರ, ನವುಲೆ, ಅಶ್ವಥ್‍ನಗರ, ಎಲ್.ಬಿ.ಎಸ್.ನಗರ, ಕೀರ್ತಿನಗರ, ಬಸವೇಶ್ವರನಗರ, ಕೃಷಿನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲಿ ಬೆಳಗ್ಗೆ 9.30 ರಿಂದ ಸಂಜೆ 5ರ ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

READ | ರಾಜ್ಯ ಸರ್ಕಾರದಿಂದ ಕವಿಮನೆಗೆ ₹ 1 ಕೋಟಿ ಅನುದಾನ, ಕಾರಣವೇನು?

MRS ವ್ಯಾಪ್ತಿಯಲ್ಲಿ ಪವರ್ ಕಟ್
ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಈ ಪ್ರದೇಶದ ವ್ಯಾಪ್ತಿಗೊಳಪಡುವ ನಗರ ವ್ಯಾಪ್ತಿಯ ಎಂ.ಆರ್.ಎಸ್. ವಾಟರ್ ಸಪ್ಲೈ, ಎಂ.ಆರ್.ಎಸ್.ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಜ್ಯೋತಿನಗರ, ವಿದ್ಯಾನಗರ, ಕಂಟ್ರಿಕ್ಲಬ್ ರಸ್ತೆ, ಚಿಕ್ಕಲ್, ಗುರುಪುರ, ಪುರಲೆ, ಸಿದ್ದೇಶ್ವರನಗರ, ಶಾಂತಮ್ಮ ಲೇಔಟ್, ಹಾಗೂ ಗ್ರಾಮೀಣ ಪ್ರದೇಶ ವ್ಯಾಪ್ತಿಯ ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆ ತಾಂಡ, ಪಿಳ್ಳಂಗಿರಿ, ಜಾವಳ್ಳಿ, ಹಾರೋಬೆನವಳ್ಳಿ, ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿಫಾರಂ, ವೀರಭದ್ರಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಅಬ್ಬರಘಟ್ಟ ಮತ್ತು ಸುತ್ತಮುತ್ತಲಿನ ಪ್ರದೇಶಗಳಲಿ ಬೆಳಗ್ಗೆ 9ರಿಂದ ಸಂಜೆ 5ರ ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕೋರಲಾಗಿದೆ.

https://suddikanaja.com/2022/12/25/pm-narendra-modi-talk-on-shivamoggas-entrepreneur-in-mann-ki-baat/

error: Content is protected !!