ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: 220 ಕೆವಿ ಎಂಆರ್‍ಎಸ್ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಶಿವಮೊಗ್ಗ ಇವರು 110/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರ ಎಂಆರ್‍ಎಸ್’ನಲ್ಲಿ ಡಿಸೆಂಬರ್ 9ರಂದು ನೂತನ 11 ಕೆವಿ ಬ್ರೇಕರ್’ಗಳನ್ನು ತುರ್ತಾಗಿ ಚಾಲನೆಗೊಳಿಸುವ ಕಾಮಗಾರಿ ಕೈಗೊಳ್ಳುವ ಪ್ರಯುಕ್ತ ಬೆಳಗ್ಗೆ 9.30 ರಿಂದ ಸಂಜೆ 5 ಗಂಟೆವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
11 ಕೆ.ವಿ. ಎಫ್ 5 ಫೀಡರ್ ವ್ಯಾಪ್ತಿಯ ಎಂಆರ್‍ಎಸ್, ವಾಟರ್ ಸಪ್ಲೈ, ಎಂಆರ್‍ಎಸ್ ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್ ಹಾಗೂ ಎಫ್-3 ಫೀಡರ್ ವ್ಯಾಪ್ತಿಯ ಜ್ಯೋತಿನಗರ, ವಿದ್ಯಾನಗರ, ಕಂಟ್ರಿ ಕ್ಲಬ್ ರಸ್ತೆ, ಚಿಕ್ಕಲ್, ಗುರುಪುರ, ಪುರಲೆ, ಸಿದ್ದೇಶ್ವರ ನಗರ, ಶಾಂತಮ್ಮ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
https://suddikanaja.com/2022/12/06/bag-handed-over-to-passenger-at-shivamogga-railway-station/