South Western Railway | ನೈರುತ್ಯ ರೈಲ್ವೆ ಸಮಯ ಪಾಲನೆಯಲ್ಲಿ ದೇಶದಲ್ಲೇ ನಂ.4ನೇ ಸ್ಥಾನ

Train

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ನೈರುತ್ಯ ರೈಲ್ವೆ (South Western)ಯ ರೈಲುಗಳ ಸಮಯಪಾಲನೆಯು ಶೇ.94.10 ಆಗಿದ್ದು, ಭಾರತೀಯ ರೈಲ್ವೆಯಲ್ಲಿಯೇ 4ನೇ ಸ್ಥಾನವನ್ನು ಪಡೆದುಕೊಂಡಿದೆ ಎಂದು ನೈರುತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕರಾದ ಶ್ರೀ ಸಂಜೀವ್ ಕಿಶೋರ್ ಹೇಳಿದರು.
ಹೊಬ್ಬಳ್ಳಿಯಲ್ಲಿ ನಡೆದ ನೈರುತ್ಯ ರೈಲ್ವೆಯ ವಲಯ ರೈಲ್ವೆ ಬಳಕೆದಾರರ ಸಲಹಾ ಸಮಿತಿಯ 22ನೇ ಸಭೆಯ ಅಧ್ಯಕ್ಣತೆ ವಹಿಸಿ ಅವರು ಮಾತನಾಡಿದರು.

READ | ಇಎಸ್‍ಐನಲ್ಲಿ 9 ಹುದ್ದೆಗಳಿಗೆ ನೇರ ಸಂದರ್ಶನ, ನೀವು ಪಾಲ್ಗೊಳ್ಳಿ

ನೈರುತ್ಯ ರೈಲ್ವೆಯು ಹಲವಾರು ವಿಭಾಗಗಳಲ್ಲಿ ಉತ್ತಮ ಸಾಧನೆಯನ್ನು ಮಾಡಿದೆ. ಮೈಸೂರು ಮತ್ತು ಎಂಜಿಆರ್ ಚೆನ್ನೈ ನಡುವೆ ದಕ್ಷಿಣ ಭಾರತದ ಮೊಟ್ಟಮೊದಲ ವಂದೇ ಭಾರತ್ (vande bharat) ಎಕ್ಸ್ ಪ್ರೆಸ್ ರೈಲಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದು, ಬೆಳಗಾವಿ, ಹೊಸಪೇಟೆ, ದಾವಣಗೆರೆ ನಿಲ್ದಾಣಗಳ ಪುನರಾಭಿವೃದ್ಧಿ‌ ಇವುಗಳ ಬಗ್ಗೆ ಮಾಹಿತಿ ನೀಡಿದರು.
ಬೆಂಗಳೂರು ದಂಡು ಮತ್ತು ಯಶವಂತಪುರ ರೈಲು ನಿಲ್ದಾಣಗಳ ಅಭಿವೃದ್ಧಿ ಕಾರ್ಯವನ್ನು ಸಹ ಕೈಗೊಳ್ಳಲಾಗುತ್ತಿದೆ ಎಂದರು.
ಹಬ್ಬ, ರಜಾದಿನಗಳಲ್ಲಿ 83 ವಿಶೇಷ ರೈಲುಗಳ ಸಂಚಾರ
ಜನರ ಅನುಕೂಲಕ್ಕಾಗಿ ಹಬ್ಬಗಳು ಮತ್ತು ರಜಾದಿನಗಳಲ್ಲಿ ನೈರುತ್ಯ ರೈಲ್ವೆಯು 83 ವಿಶೇಷ ರೈಲುಗಳನ್ನು ಓಡಿಸಿದೆ ಮತ್ತು ರೈಲುಗಳಿಗೆ 1,798 ಹೆಚ್ಚುವರಿ ಕೋಚ್ ಗಳನ್ನು ಅಳವಡಿಸಲಾಗಿದೆ. ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳ ಕುರಿತು ವಿವರಿಸಿದ ಅವರು ಹೊಸಮಾರ್ಗ, ಜೋಡಿಮಾರ್ಗ ಮತ್ತು ವಿದ್ಯುದೀಕರಣ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲಾಗುತ್ತಿದೆ. ಈಗಾಗಲೇ ನೈರುತ್ಯ ರೈಲ್ವೆ ಜಾಲದ ಶೇ.52 ವಿದ್ಯುದೀಕರಣಗೊಂಡಿದೆ ಎಂದು ತಿಳಿಸಿದರು.
ಸಭೆಯಲ್ಲಿ ನೈರುತ್ಯ ರೈಲ್ವೆಯ ಅಪರ ಪ್ರಧಾನ ವ್ಯವಸ್ಥಾಪಕ ಪಿ.ಕೆ. ಮಿಶ್ರಾ, ಸಂಸದರಾದ ಶಿವಕುಮಾರ ಉದಾಸಿ, ಪಿ.ಸಿ. ಗದ್ದೀಗೌಡರ್, ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ, ಗೋವಾದ ಲೋಕೋಪಯೋಗಿ ಸಚಿವ ನೀಲೇಶ್ ಕಾಬ್ರಾಲ್, ವಾಣಿಜ್ಯೋದ್ಯಮ ಸಂಸ್ಥೆ, ಪ್ರಯಾಣಿಕ ಸಂಘಗಳು, ಗ್ರಾಹಕ ರಕ್ಷಣಾ ಸಂಘಟನೆ, ರೈಲ್ವೆ ಮಂಡಳಿಯ ವಿಶೇಷ ಪ್ರತಿನಿಧಿತ್ವದ 30 ಸದಸ್ಯರು, ರೈಲ್ವೆ ಬಳಕೆದಾರರ ಸಲಹಾ ಸಮಿತಿಯ ಸದಸ್ಯರು ಭಾಗವಹಿಸಿದ್ದರು.

https://suddikanaja.com/2022/12/02/doctor-suicide-at-shimoga/

error: Content is protected !!