Covid 4th Wave | ಶಿವಮೊಗ್ಗದಲ್ಲಿ ಇಬ್ಬರಿಗೆ ಕೊರೊ‌ನಾ ಸೋಂಕು, ಅದರಲ್ಲೊಬ್ಬನದ್ದು ವಿದೇಶ ಟ್ರಾವೆಲ್ ಹಿಸ್ಟರಿ

Covid 1

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಪ್ರತಿ ದಿನ 80 ರಿಂದ 100 ಜನರ ಕೊರೋನಾ ಪರೀಕ್ಷೆ ನಡೆಸಲಾಗುತ್ತಿತ್ತು. ಆದರೆ ಈಗ 240 ಪರೀಕ್ಷೆಗಳನ್ನು ನಡೆಸಲಾಗಿದೆ. 2 ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಒಂದು ಪ್ರಕರಣ ಅಂತರಾಷ್ಟ್ರೀಯ ಟ್ರಾವೆಲ್ ಹಿಸ್ಟರಿಯದ್ದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ ಹೇಳಿದರು.

READ | ಚಿತ್ರದುರ್ಗದಲ್ಲಿ ನಡೆಯಲಿದೆ ಬೃಹತ್ ಸಮಾವೇಶ, 5 ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ

ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಮಾಸಿಕ ಕೆಡಿಪಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ 108 ಆಂಬುಲೆನ್ಸ್ 24, ನಗುಮಗು 7, ಜೆಎಸ್‍ವಿ 31 ಸೇರಿ ಒಟ್ಟು 60 ಆಂಬ್ಯುಲೆನ್ಸ್ ಇವೆ. ತಾಲ್ಲೂಕುಗಳಲ್ಲಿ 6 ಕೆಎಲ್ ಸಾಮರ್ಥ್ಯದ ಆಕ್ಸಿಜನ್ ಪ್ಲಾಂಟ್‍ಗಳು, ಐಸಿಯು ಬೆಡ್‍ಗಳು ಇವೆ. ಸಿಮ್ಸ್ ನಲ್ಲಿ 90 ಐಸಿಯು ಬೆಡ್ ಮತ್ತು 52 ಕೆಎಲ್ ಸಾಮಥ್ರ್ಯದ ಆಕ್ಸಿಜನ್ ಪ್ಲಾಂಟ್ ಇದೆ ಎಂದರು.
ಕೋವಿಡ್ ಲಸಿಕೆ ಬಗ್ಗೆ ಜಾಗೃತಿ
ಇದುವರೆಗೆ ಜಿಲ್ಲೆಯಲ್ಲಿ 12 ರಿಂದ 14 ವಯಸ್ಸಿನವರಿಗೆ ಕೋವಿಡ್ ಲಸಿಕೆ ಮೊದಲನೇ ಡೋಸ್ ಶೇ.110 ಮತ್ತು ಎರಡನೇ ಡೋಸ್ ಶೇ.86 ನೀಡಲಾಗಿದೆ. 15 ರಿಂದ 17 ವಯಸ್ಸಿನವರಿಗೆ ಮೊದಲನೇ ಡೋಸ್ ಶೇ.86, ಎರಡನೇ ಡೋಸ್ ಶೇ.97, 18+ ಮೊದಲನೇ ಡೋಸ್ 102, ಎರಡನೇ ಡೋಸ್ ಶೇ.99.9 ಹಾಗೂ ಮುನ್ನೆಚ್ಚರಿಕೆ ಡೋಸ್ ಶೇ.16.0 ನೀಡಲಾಗಿದ್ದು, ಮುನ್ನೆಚ್ಚರಿಕೆ ಡೋಸ್ ಶೇ.100 ಸಾಧನೆಗೆ ಕ್ರಮ ವಹಿಸಲಾಗುತ್ತಿದೆ ಎಂದರು.
ಕೋವಿಡ್ ನಿಯಂತ್ರಿಸಲು ಸೂಚನೆ
ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳನ್ನು ನಿರ್ವಹಿಸಲು ಸರ್ವ ರೀತಿಯಲ್ಲಿ ಸಿದ್ದತೆ ಮಾಡಿಕೊಳ್ಳುವುದರೊಂದಿಗೆ, ಕೋವಿಡ್ ನಿಯಂತ್ರಣ ಕ್ರಮಗಳು, ಕೋವಿಡ್ ಲಸಿಕಾಕರಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಡಾ.ಎಸ್.ಸೆಲ್ವಕುಮಾರ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೇಂದ್ರಿತ ಪ್ರದೇಶಗಳಲ್ಲಿ ಐಎಲ್‍ಐ, ಸಾರಿ(ಎಸ್‍ಎಆರ್‍ಐ) ಪ್ರಕರಣಗಳನ್ನು ಕೋವಿಡ್ ಪರೀಕ್ಷೆ ಒಳಪಡಿಸಬೇಕು. ಹಾಗೂ ಎಲ್ಲರೂ ಕೋವಿಡ್ ನಿಯಂತ್ರಣ ಕ್ರಮಗಳನ್ನು ಅಳವಡಿಸಿಕೊಳ್ಳಬೇಕೆಂದು ತಿಳಿಸಿದರು.
ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಜಿಲ್ಲಾ ಪಂಚಾಯಿತಿ ಸಿಇಓ ಎನ್.ಡಿ. ಪ್ರಕಾಶ್, ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಎಫ್ ಹೊನ್ನಳ್ಳಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.

https://suddikanaja.com/2022/12/26/sudden-vomiting-and-diarrhea-in-more-than-30-people-people-are-panic/

error: Content is protected !!