VRW Jobs | ವಿ.ಆರ್.ಡಬ್ಲ್ಯು ಹುದ್ದೆಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

IMG 20220517 232257 102

 

 

ಸುದ್ದಿ‌ ಕಣಜ.ಕಾಂ ಶಿವಮೊಗ್ಗ
SHIVAMOGGA: ಗ್ರಾಮೀಣ ಪುನರ್ವಸತಿ ಯೋಜನೆಯಡಿ ಹೊಸನಗರ ತಾಲ್ಲೂಕಿನ ಅಂಡಗದೂದೂರು, ನಗರ(ಮೂಡುಗೊಪ್ಪ) ಮತ್ತು ರಾಮಚಂದ್ರಾಪುರ ಗ್ರಾಮ ಪಂಚಾಯಿತಿಗಳಲ್ಲಿ ವಿ.ಆರ್.ಡಬ್ಲ್ಯು ಹುದ್ದೆಯು ಖಾಲಿ ಇದ್ದು, ಗ್ರಾ.ಪಂ ಅಥವಾ ಹತ್ತಿರದ ಗ್ರಾಮ ಪಂಚಾಯಿತಿಗಳಲ್ಲಿ ವಾಸವಿರುವ 18 ರಿಂದ 45 ವಯೋಮಿತಿಯೊಳಗಿನ ಅರ್ಹ ವಿಕಲಚೇತನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

READ | ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ, ರಾಜ್ಯದಲ್ಲಿ‌ ಒಂದು ಲಕ್ಷ ಹುದ್ದೆಗಳ ಭರ್ತಿ ಶೀಘ್ರ

ನಿಗದಿತ ಅರ್ಜಿ ನಮೂನೆಯನ್ನು ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಎಂಆರ್ ಡಬ್ಲ್ಯು ಆಗಿ ಕಾರ್ಯ ನಿರ್ವಹಿಸುತ್ತಿರುವ ರವಿಕುಮಾರ್ ಮೊ.ಸಂ 9731922693 ಇವರಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ 10 ನೇ ತರಗತಿ ಉತ್ತೀರ್ಣರಾಗಿರುವ ಬಗ್ಗೆ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಾಸಸ್ಥಳ ದೃಢೀಕರಣ ಪತ್ರ, ಆಧಾರ್ ಕಾರ್ಡ್, ಯುಡಿಐಡಿ ಕಾರ್ಡ್ ದಾಖಲಾತಿಗಳನ್ನು 2023 ರ ಜನವರಿ 11 ರೊಳಗಾಗಿ ಸಲ್ಲಿಸಬೇಕೆಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

error: Content is protected !!