ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವಕ್ಕೆ ಸಕಲ ಸಿದ್ಧತೆಗಳನ್ನು ಮಾಡಲಾಗಿದೆ. ಶುಕ್ರವಾರ ರಾತ್ರಿ ರಾಜ್ಯದ ಮೂಲೆ ಮೂಲೆಗಳಿಂದ ನಗರಕ್ಕೆ ಆಗಮಿಸಿದ ವಿದ್ಯಾರ್ಥಿಗಳಿಗೆ ತಂಗುವುದಕ್ಕೆ ಸಕಲ ವ್ಯವಸ್ಥೆಗಳನ್ನು ಮಾಡಲಾಗಿದೆ.
ಶುಕ್ರವಾರ ರಾತ್ರಿ 8.30ರ ಹೊತ್ತಿಗೆ 22 ಜಿಲ್ಲೆಗಳಿಂದ ಸುಮಾರು 830 ವಿದ್ಯಾರ್ಥಿಗಳು ಆಗಮಿಸಿ ನೋಂದಣಿ ಮಾಡಿಕೊಂಡಿದ್ದಾರೆ.
READ | ನಾಳೆಯಿಂದ ಪ್ರತಿಭಾ ಕಾರಂಜಿ ಹವಾ, ಇಲ್ಲಿದೆ ಕಂಪ್ಲೀಟ್ ರಿಪೋರ್ಟ್
ಖುದ್ದು ಡಿಸಿ ಭೇಟಿ ನೀಡಿ ಪರಿಶೀಲನೆ
ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಅವರು ಎಲ್ಲ ವ್ಯವಸ್ಥೆಗಳನ್ನು ಪರಿಶೀಲಿಸಿ ಊಟದ ರುಚಿ ಕೂಡ ಪರಿಶೀಲಿಸಿದರು. ವಾಸ್ತವ್ಯ, ಎಲ್ಲ ಸ್ಪರ್ಧೆ ವೇದಿಕೆಗಳ ಸಿದ್ಧತೆಗಳನ್ನು ಪರಿಶೀಲಿಸಿದರು. ಮಕ್ಕಳಿಗೆ ಸ್ಯಾನಿಟರಿ ಕಿಟ್ ಗಳ ವಿವರಣೆಯನ್ನು ಪಡೆದರು. ವ್ಯವಸ್ಥೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಜಿಲ್ಲಾ ಪಂಚಾಯಿತಿ ಸಿಇಓ ಪ್ರಕಾಶ್, ಡಿಡಿಪಿಐ ಸಿ.ಆರ್. ಪರಮೇಶ್ವರಪ್ಪ, ಸಹ ನಿರ್ದೇಶಕರಾದ ಎಚ್.ಮಂಜುನಾಥ್, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ, ಸಮಾಜ ಕಲ್ಯಾಣ ಅಧಿಕಾರಿಗಳು ಹಾಗೂ ಎಲ್ಲ ಕ್ಷೇತ್ರ ಶಿಕ್ಷಣ ಅಧಿಕಾರಿಗಳು, ಶಿಕ್ಷಣ ಅಧಿಕಾರಿಗಳು ಎಲ್ಲ ಸಮಿತಿಗಳ ಸಂಚಾಲಕರು ಸದಸ್ಯರು ಪೋಷಕರು ಉಪಸ್ಥಿತರಿದ್ದರು.
https://suddikanaja.com/2023/01/04/demand-to-name-the-shivamogga-airport/