Shivamogga airport | ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಡೇಟ್ ಫಿಕ್ಸ್

Shivamogga airport

 

 

ಸುದ್ದಿ‌ ಕಣಜ.ಕಾಂ ಶಿವಮೊಗ್ಗ
SHIVAMOGGA: ತಾಲೂಕಿನ‌ ಸೋಗಾನೆಯಲ್ಲಿ‌ ನಿರ್ಮಾಣ‌ ಹಂತದಲ್ಲಿರುವ ವಿಮಾನ ನಿಲ್ದಾಣವನ್ನು ‌ಫೆಬ್ರವರಿ 13ರಂದು‌ ಉದ್ಘಾಟಿಸಲಾಗುವುದು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

READ | ಶಿವಮೊಗ್ಗ ವಿಮಾನ‌ ನಿಲ್ದಾಣಕ್ಕೆ ಬಿ.ಎಸ್.ಯಡಿಯೂರಪ್ಪ ಭೇಟಿ, ಕಾಮಗಾರಿಗಳ‌ ವೀಕ್ಷಣೆ

ಚನ್ನಮುಂಬಾಪುರದಲ್ಲಿ ಜಿಲ್ಲಾ ಜಂಗಮ ಸಮಾಜದಿಂದ ನಿರ್ಮಿಸಿರುವ ಜಂಗಮ ಸಮಾಜದ ಸಾಂಸ್ಕೃತಿಕ ಭವನ ಶಿಲಾನ್ಯಾಸ ಹಾಗೂ ಭೂಮಿಪೂಜೆ ಸಮಾರಂಭ ನೆರವೇರಿಸಿ‌ ಅವರು ಮಾತನಾಡಿದರು.
ವಿಮಾನ ನಿಲ್ದಾಣವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಲೋಕಾರ್ಪಣೆಗೊಳಿಸಲಿದ್ದಾರೆ‌ ಎಂದು ತಿಳಿಸಿದರು.
ಮುಗಿಯುವ ಹಂತದಲ್ಲಿದೆ ಕಾಮಗಾರಿ
ವಿಮಾನ ನಿಲ್ದಾಣದ ಕಾಮಗಾರಿಯು ಮುಗಿಯುವ ಹಂತದಲ್ಲಿದೆ. ವಿಮಾನ ಹಾರಾಟಕ್ಕೆ ಎಲ್ಲ ರೀತಿಯ ಯೋಜನೆ ರೂಪಿಸಲಾಗಿದೆ. ಮುಂದಿನ ದಿನದಲ್ಲಿ ಈ ಭಾಗದ ಜನರು ಇದರ ಸದುಪಯೋಗ ಪಡೆದುಕೊಳ್ಳಬಹುದು ಎಂದು‌ ತಿಳಿಸಿದರು.

ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ, ಮಹಾನಗರ ಪಾಲಿಕೆ ಸದಸ್ಯ ಎಚ್.ಸಿ. ಯೋಗೇಶ್, ವೀರಶೈವ ಸಮಾಜ ಸೇವಾ ಸಂಘದ ಅಧ್ಯಕ್ಷ ಎಸ್.ಎಸ್. ಜ್ಯೋತಿಪ್ರಕಾಶ್, ಜಂಗಮ ಸಮಾಜ ಅಧ್ಯಕ್ಷ ಎ.ಎಂ. ಚಂದ್ರಯ್ಯ, ಟಿ.ವಿ. ಈಶ್ವರಯ್ಯ, ಎಚ್.ಎಲ್. ಲಿಂಗರಾಜ್, ಎಚ್. ಮಲ್ಲಿಕಾರ್ಜುನ ಸ್ವಾಮಿ, ಪಾರ್ವತಮ್ಮ ಸಿ.ಎಂ. ಪಂಚಾಕ್ಷರಯ್ಯ, ಎಸ್. ಅಡವೀಶಯ್ಯ, ಜಿ.ಎಸ್. ಹೀರೆಮಠ, ಪುಟ್ಟಸ್ವಾಮಿ, ಸುಜಯ್ ಪ್ರಸಾದ್ ಇದ್ದರು.

https://suddikanaja.com/2023/01/04/demand-to-name-the-shivamogga-airport/

error: Content is protected !!