Court News | ಯುವಕನಿಗೆ ₹30 ಸಾವಿರ ದಂಡ ವಿಧಿಸಿದ ಶಿವಮೊಗ್ಗ ನ್ಯಾಯಾಲಯ

Judgement

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಯುವಕನಿಗೆ 1 ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು ₹30,000 ದಂಡ, ದಂಡವನ್ನು ಕಟ್ಟಲು ವಿಫಲನಾದರೆ ಹೆಚ್ಚುವರಿಯಾಗಿ 1 ತಿಂಗಳು ಸಾದಾ ಕಾರವಾಸ ಶಿಕ್ಷೆ ನೀಡಿ ನ್ಯಾಯಾಲಯ ಆದೇಶಿಸಿದೆ.

READ | ಬಜರಂಗ ದಳ ಸಹ ಸಂಚಾಲಕನ ಮೇಲೆ ಹಲ್ಲೆ ಪ್ರಕರಣ, ಮೂವರು ಪೊಲೀಸರ ವಶಕ್ಕೆ, ಎಸ್.ಪಿ ಹೇಳಿದ್ದೇನು?

2022ನೇ ಸಾಲಿನಲ್ಲಿ 17 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ನೊಂದ ಬಾಲಕಿಯ ತಂದೆ ನೀಡಿದ ದೂರಿನ ಮೇರೆಗೆ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆಗಿನ ತನಿಖಾಧಿಕಾರಿ ಜಿ.ಕೆ.ಮಧುಸೂದನ್ ತನಿಖೆ ಕೈಗೊಂಡು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು.
ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್‌ ಕೋರ್ಟ್ FTSC–II (POCSO) ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದು ನ್ಯಾಯಾಧೀಶ ಜಿ.ಎಸ್.ಮೋಹನ್ ಅವರು ಆರೋಪಿತನ ವಿರುದ್ಧ ಪೋಕ್ಸೋ ಕಾಯ್ದೆ ಅಡಿಯಲ್ಲಿ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಹೊಸನಗರ ತಾಲ್ಲೂಕಿನ 27 ವರ್ಷದ ಯುವಕನಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರಿ ಅಭಿಯೋಜಕ ಹರಿಪ್ರಸಾದ್ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.

error: Content is protected !!