Heart attack | ಶಾಲೆಗೆ ತೆರಳುವ ಸಿದ್ಧತೆಯಲ್ಲಿದ್ದ ಬಾಲಕನಿಗೆ ಹಾರ್ಟ್ ಅಟ್ಯಾಕ್, ಸಾವು

Soraba

 

 

ಸುದ್ದಿ ಕಣಜ.ಕಾಂ ಸೊರಬ
SORAB: ತಾಲೂಕಿ‌ನ ಎಣ್ಣೆಕೊಪ್ಪ ಗ್ರಾಮದಲ್ಲಿ ಶಾಲೆಗೆ ತೆರಳಲು ಪೂರ್ವಸಿದ್ಧತೆಯಲ್ಲಿದ್ದ ಬಾಲಕನೊಬ್ಬ ಹೃದಯಾಘಾತದಿಂದ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಭತ್ತದ ವ್ಯಾಪಾರಿ ರಜತಾದ್ರಯ್ಯ ಅವರ ಪುತ್ರ ಆರ್.ಎಚ್.ಜಯಂತ್(16) ಮೃತ ಬಾಲಕ. ಈತನು ಶಾಲೆಗೆ ಹೊರಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾಗ ಎದೆನೋವು ಕಾಣಿಸಿಕೊಂಡಿದೆ. ಮನೆಯಲ್ಲಿ ಕುಸಿದುಬಿದ್ದಿದ್ದು, ಸಮೀಪದ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದೆ. ಪರಿಶೀಲಿಸಿದ ವೈದ್ಯರು ಬಾಲಕ ಮೃತಪಟ್ಟಿರುವುದನ್ನು ಖಚಿತಪಡಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ‌.

https://suddikanaja.com/2023/01/05/home-minister-araga-jnanendra-help/

error: Content is protected !!